Breaking News

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Advt_Headding_Middle

ವಿಶೇಷ ಗ್ರಾಮ ಸಭೆ

ಬಾಳಿಲ ಗ್ರಾಮ ಪಂಚಾಯತ್‌ ನಲ್ಲಿ ಅಜಾದಿಕಾ ಅಮೃತ ಮಹೋತ್ಸವ ಮತ್ತು ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮ ಹಾಗೂ ದೂರದೃಷ್ಟಿ ಯೋಜನೆ ತಯಾರಿಕೆ ಬಗ್ಗೆ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಚಾಕೊಟೆಡ್ಕರವರ ಅಧ್ಯಕ್ಷತೆಯಲ್ಲಿ ಅ.2 ರಂದು ವಿದ್ಯಾಬೋಧಿನೀ ಪ್ರಾ.ಶಾಲಾ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು, ನಂತರ ಗಾಂಧೀಜಿ ಜೀವನ ಚರಿತ್ರೆಯ ಬಗ್ಗೆ ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯ ನಿವೃತ ಕನ್ನಡ ಭಾಷಾ ಬೋಧಕರಾದ ಜೆ ಸದಾಶಿವ ಭಟ್‌ ಉಪನ್ಯಾಸ ನೀಡಿದರು. ಬಳಿಕ ದೂರದೃಷ್ಟಿ ಯೋಜನೆಯ ತಯಾರಿಕೆ ಬಗ್ಗೆ ಗ್ರಾಮ ಸಭೆ ನಡೆಯಿತು. ಗ್ರಾಮಸ್ಥರಿಂದ ಸಲಹೆ ಸೂಚನೆ, ಬೇಡಿಕೆಗಳನ್ನು ಪಡೆಯಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ, ಸರ್ವ ಸದಸ್ಯರು, ತಾ.ಪಂ ನಿಕಟಪೂರ್ವ ಸದಸ್ಯರು, ಸಂಜೀವಿನಿ ಸ್ವ-ಸಹಾಯ ಸಂಘದ ಪದಾಧಿಕಾರಿಗಳು, ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಕಿ. ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಗ್ರಾಮಸ್ಥರು, ಗ್ರಾ.ಪಂ ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು  ಉಪಸ್ಥಿತರಿದ್ದರು.
ಪಂ.ಅ.ಅಧಿಕಾರಿ ಹೂವಪ್ಪ ಗೌಡರವರು ಸ್ವಾಗತಿಸಿ, ಸದಸ್ಯ ಹರ್ಷ ಭಟ್ ವಂದಿಸಿದರು.
ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ರೈ ಟಪ್ಪಾಲುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.