Breaking News

ಸಂಪ್ಯಾಡಿ ಸ.ಕಿ.ಪ್ರಾ.‌ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Advt_Headding_Middle


ಬಳ್ಪ ಗ್ರಾ.ಪಂ. ವ್ಯಾಪ್ತಿಯ ಬೀದಿಗುಡ್ಡೆ ಬಳಿಯ ಸಂಪ್ಯಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು‌ ಆಚರಿಸಲಾಯಿತು. ಶಾಲಾ ಮಕ್ಕಳು ಆರಂಭಿಕ ಗೀತೆ ಹಾಡಿದ ಬಳಿಕ ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯಂತ ಸಂಪ್ಯಾಡಿಯವರು ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು. ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಶಾಲಾ ಆವರಣ, ಅಂಗಡಿಗಳ ಮುಂಭಾಗ, ಭಜನಾ ಮಂದಿರದ ಸುತ್ತ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಬಳಿಕ ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯಂತ್ ಸಂಪ್ಯಾಡಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸಂಪ್ಯಾಡಿ ಇದರ ಗೌರವಾಧ್ಯಕ್ಷ ವಿಶ್ವನಾಥ ರೈ ಅರ್ಗುಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರೆ, ಅತಿಥಿಗಳಾಗಿ ಅಂಗನವಾಡಿ ಸಹಾಯಕಿ ಶ್ರೀಮತಿ ಮೋಹಿನಿ, ಪೋಷಕರಾ ಹೊನ್ನಪ್ಪ ಎಂರ್ಬಿಲ ಮತ್ತು ಶ್ರೀಮತಿ ವಿಶಾಲಾಕ್ಷಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮಾವತಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಿಗೆ ಭಾಷಣ, ದೇಶ ಭಕ್ತಿ ಗೀತೆ, ಛದ್ಮವೇಷ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಗೌರವ ಶಿಕ್ಷಕಿ ಶ್ರೀಮತಿ ಪವಿತ ಚೆನ್ನಪ್ಪ ವಂದಿಸಿದರು. ಶಿಕ್ಷಕಿ ಶ್ರೀಮತಿ ಗೀತಾ ಮಹೇಶ್ ಸೂಂತಾರು ಕಾರ್ಯಕ್ರಮ ನಿರೂಪಿಸಿದರು. ಜಯಂತ್ ಸಂಪ್ಯಾಡಿ, ಹೊನ್ನಪ್ಪ ಎಂರ್ಬಿಲ, ಶಿವಪ್ಪ ಮತ್ತು ರಾಧಾಕೃಷ್ಣ ರೈ ಚಹಾ ತಿಂಡಿಯ ವ್ಯವಸ್ಥೆ ಮಾಡಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ಊರವರು ಹಾಗೂ ಶಾಲಾ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.