ಗಾಂಧಿ ಜಯಂತಿ ಅಂಗವಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ 2021ರ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ

Advt_Headding_Middle

 

ಸುಳ್ಯ ತಾಲೂಕು ಅಂಬೇಡ್ಕರ್ ರಕ್ಷಣಾ ವೇದಿಕೆ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅ.2 ರಂದು ಗಾಂಧಿ ನಡಿಗೆ ಹಾಗೂ ಸೇವಾ ಪ್ರಶಸ್ತಿ -2021 ಪ್ರದಾನ ಸಮಾರಂಭ ಜಾಲ್ಸೂರು ಅಡ್ಕಾರ್ ಅಂಬೇಡ್ಕರ್ ಭವನದಲ್ಲಿ ನಡೆಯಯಿತು. ಅಂಬೇಡ್ಕರ್ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಮೋಹನ್ ಕುಮಾರ್ ಅಡ್ಕಬಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿದರು.
ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಮಹಾತ್ಮ ಗಾಂಧೀಜಿಯ ಅನುಸ್ಮರಣ ನುಡಿಗಳನ್ನು ಆಡಿದರು.

ಈ ಸಮಾರಂಭದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಸಮಿತಿ ವತಿಯಿಂದ 2021ರ ಚೊಚ್ಚಲ ಸೇವಾ ಪ್ರಶಸ್ತಿಯನ್ನು ನೀಡಿ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು. ಸಾರ್ವಜನಿಕ ಸೇವಾ ವಿಭಾಗದಲ್ಲಿ ಸುಳ್ಯ ಕೆ.ಎಸ್.ಆರ್.ಟಿ.ಸಿ. ಡಿಪೋ ವ್ಯವಸ್ಥಾಪಕ ಸುಂದರರಾಜ್, ಶಿಕ್ಷಣ ವಿಭಾಗದಲ್ಲಿ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ್, ಆರೋಗ್ಯ ವಿಭಾಗದಲ್ಲಿ ಕ್ಯಾನ್ಸರ್ ತಜ್ಞ ಡಾ.ರಘು, ಸಾಮಾಜಿಕ ವಿಭಾಗದಲ್ಲಿ ಎಂ.ಬಿ. ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ.ಬಿ.ಸದಾಶಿವ, ಪತ್ರಿಕಾ ವಿಭಾಗದಲ್ಲಿ ಸುದ್ದಿ ಬಿಡುಗಡೆ ವರದಿಗಾರ ಹಸೈನಾರ್ ಜಯನಗರ ಹಾಗೂ ಪತ್ರಕರ್ತ ಸತೀಶ್ ಹೊದ್ದೆಟ್ಟಿ ಯವರಿಗೆ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ನಿವೃತ್ತ ಯೋಧ ಅಡ್ಡಂತಡ್ಕ ದೇರಣ್ಣ ಗೌಡ ಸನ್ಮಾನ ನೆರವೇರಿಸಿದದರು.
ಸನ್ಮಾನವನ್ನು ಸ್ವೀಕರಿಸಿದ, ಎಂ ಬಿ ಸದಾಶಿವ, ಡಾ. ರಘು, ಶಿಕ್ಷಣಾಧಿಕಾರಿ ಎಸ್ಪಿ ಮಹದೇವ್, ಸುದ್ದಿ ಪತ್ರಿಕೆಯ ವರದಿಗಾರ ಹಸೈನಾರ್ ಜಯನಗರ ಕಾರ್ಯಕ್ರಮದಲ್ಲಿ ಶುಭ ಹಾರೈಸಿ ಮಾತನಾಡಿದರು.
ವೇದಿಕೆಯಲ್ಲಿ ಸುಳ್ಯ ಕೃಷಿ ತಾಂತ್ರಿಕ ಅಧಿಕಾರಿ ಮೋಹನ್ ನಂಗಾರು, ಸುದ್ದಿ ಸಮೂಹ ಸಂಸ್ಥೆ ಸುಳ್ಯ ಇದರ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ಜಾಲ್ಸೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಬು, ಮೊದಲಾದವರು ಉಪಸ್ಥಿತರಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಕೊಡಗು ಜಿಲ್ಲಾ ಅಧ್ಯಕ್ಷ ಉನೈಸ್ ಪೆರಾಜೆ ರವರನ್ನು ಸಂಘಟನೆಯ ವತಿಯಿಂದ ಸನ್ಮಾನಿಸಲಾಯಿತು.
ಸಮಾರಂಭಕ್ಕೂ ಮುನ್ನ ಪುಟಾಣಿ ಮಕ್ಕಳು ಹಾಗೂ, ಸಾರ್ವಜನಿಕರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಘಟನೆಯ ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಜೇಶ್ ಕಜೆ ಸ್ವಾಗತಿಸಿ, ಸಾಗರ್ ಪಾಟಾಜೆ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಘಟನೆಯ ಕಾರ್ಯಕರ್ತರು ಗಳಾದ ವಿಜಯ ಪಾಟಾಜೆ, ಸಂದೇಶ್ ಕುಮಾರ್ ರಂಗತಮಲೆ, ಅಡ್ಕಾರು ಘಟಕದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಕಾರ್ಯಕ್ರಮಕ್ಕೆ ಸಹಕರಿಸಿದರು. ಎಲ್ಲಾ ಕಾರ್ಯಕ್ರಮದಲ್ಲಿ ನಾನೂರಕ್ಕೂ ಹೆಚ್ಚು ದಲಿತ ಸಮುದಾಯದ ಜನಾಂಗದವರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.