Breaking News

ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಕಾನೂನು ಅರಿವು ಸರಣಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

Advt_Headding_Middle

 

ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ, ಪೊಲೀಸ್ ಇಲಾಖೆ ಸುಳ್ಯ, ಕಂದಾಯ ಇಲಾಖೆ ಸುಳ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಸುಳ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಾರ್ವಜನಿಕ ಆರೋಗ್ಯ ಇಲಾಖೆ ಸುಳ್ಯ, ಕೆವಿಜಿ ಕಾನೂನು ಕಾಲೇಜು ಸುಳ್ಯ, ಸುದ್ದಿ ಸಮೂಹ ಮಾಧ್ಯಮ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕಾನೂನು ಅರಿವು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಅಕ್ಟೋಬರ್ 2 ರಂದು ಸುಳ್ಯದ ಶ್ರೀ ಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ವಹಿಸಿದ್ದರು.
ಕಾರ್ಯಕ್ರಮವನ್ನು ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ್, ಕಿರಿಯ ನ್ಯಾಯಾಧೀಶರಾದ ಯಶ್ವಂತ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ವೇದಿಕೆಯಲ್ಲಿ ಸುಳ್ಯ ನ್ಯಾಯಾಲಯದ ಎಎಪಿ ಜನಾರ್ಧನ ಬಿ, ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಪ್ಪಗೌಡ, ತಹಸಿಲ್ದಾರ್ ಮಂಜುನಾಥ, ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ, ಸುಳ್ಯ ಶಿಕ್ಷಣಾಧಿಕಾರಿ ಎಸ್ಪಿ ಮಹಾದೇವ, ವಕೀಲರ ಸಂಘದ ಕಾರ್ಯದರ್ಶಿ ಪುಷ್ಪರಾಜ್ ಗಾಂಭೀರ್, ಉಪಸ್ಥಿತರಿದ್ದರು.
ಗಾಂಧಿ ಜಯಂತಿ ಅಂಗವಾಗಿ ಗಾಂಧೀಜಿ ಉಪನ್ಯಾಸ ವನ್ನು ಐವರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮಹಮ್ಮದ್ ಇಸಾಕ್ ನೀಡಿದರು.
ಸುಳ್ಯ ನ್ಯಾಯಾಲಯದ ಹಿರಿಯ ವಕೀಲ ಜಗದೀಶ್ ಹುದೇರಿ ಲೋಕ್ ಅದಾಲತ್ ಉಪಯೋಗದ ಬಗ್ಗೆ ಉಪನ್ಯಾಸವನ್ನು ನೀಡಿದರು.
ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಸ್ತ್ರೀಶಕ್ತಿ ಸಂಘಟನೆಯ ಮಹಿಳೆಯರು, ಶಿಕ್ಷಕರು, ಭಾಗವಹಿಸಿದ್ದರು.
ಈ ಕಾರ್ಯಕ್ರಮ ನಿರಂತರವಾಗಿ ನ. 14 ರವರೆಗೆ ತಾಲೂಕಿನ ವಿವಿಧ ಕಡೆಗಳಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಸೂಪರ್ವೈಸರ್ ರವಿ ಶ್ರೀ ನಿರೂಪಿಸಿ, ಸೈಲಜ ಸ್ವಾಗತಿಸಿ ಜನಾರ್ಧನ್ ಬಿ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.