ಅಡ್ಕಾರು : ಅಂಬೇಡ್ಕರ್ ಭವನದಲ್ಲಿ ಕಾನೂನು ಅರಿವು ಕಾರ್ಯಕ್ರಮ

Advt_Headding_Middle

 

ಸುಳ್ಯ ತಾಲೂಕು ಕಾನೂನು ಪ್ರಾಧಿಕಾರದ ಸಮಿತಿ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಅಡ್ಕಾರು ಅಂಬೇಡ್ಕರ್ ಭವನದಲ್ಲಿ ಇಂದು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುಂದರ ಪಾಟಜೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಪ್ಪ ಗೌಡ ಪ್ರಾಸ್ತಾವಿಕ ಮಾತನಾಡಿ ಕಾನೂನು ಅರಿವು ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ದೇಶದ ಮಹಾತ್ಮರಾದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮದಿನಾಚರಣೆಯನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯವರು ಈ ದಿನ ಏರ್ಪಡಿಸಿರುವುದು ಬಹಳ ಅರ್ಥಪೂರ್ಣವಾಗಿದೆ. ಎಂದು ಹೇಳಿದರು. ಸುಳ್ಯ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ್ ಎ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನದ ಕೆಲವು ತತ್ವಗಳ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶ ಹಾಗೂ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ನಡೆಯಲಿರುವ ಕಾನೂನು ಅರಿವು ಕಾರ್ಯಕ್ರಮಗಳ ವಿಷಯದಲ್ಲಿ ಮಾಹಿತಿ ನೀಡಿ ಕಾನೂನಿನಡಿಯಲ್ಲಿ ಎಲ್ಲರೂ ಸಮಾನರು, ದಲಿತರು ಹಿಂದುಳಿದ ವರ್ಗದವರು ಶ್ರೀಮಂತರು ಎಂಬ ಭೇದಭಾವವಿಲ್ಲದೆ ಕಾನೂನು ಎಲ್ಲರನ್ನೂ ಒಂದೇ ರೀತಿಯಲ್ಲಿ ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದರು. ಯಾವುದೇ ಸಂಘಟನೆಗಳ ಹೆಸರುಗಳನ್ನು ಹೇಳಿ ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು. ಯಾವುದೇ ಸಂದರ್ಭದಲ್ಲಿ ನ್ಯಾಯಕ್ಕಾಗಿ ಪ್ರತಿಯೊಬ್ಬರಿಗೂ ಕಾನೂನಿನ ಸಹಾಯ ಪಡೆಯುವ ಹಾಗೂ ಪ್ರತಿಯೊಂದು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳುವ ಸೌಲಭ್ಯಗಳು ಲೋಕ್ ಅದಾಲತ್ ಮೂಲಕ ಸಾಧ್ಯವಾಗುತ್ತದೆ ಎಂದು ಹೇಳಿದರು.
ವೇದಿಕೆಯಲ್ಲಿ ಸುಳ್ಯ ನ್ಯಾಯಾಲಯದ ಎಎಪಿ ಜನಾರ್ಧನ್ ಬಿ, ಎಂಬಿ ಫೌಂಡೇಶನ್ ಅಧ್ಯಕ್ಷ ಎಂಬಿ ಸದಾಶಿವ, ಶಿಕ್ಷಣಾಧಿಕಾರಿ ಎಸ್ ಪಿ ಮಹದೇವ್, ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಮೋಹನ್ ನಂಗಾರು, ಎಪಿಎಂಸಿ ಮಾಜಿ ಅಧ್ಯಕ್ಷ ಅಡ್ಯಂತಡ್ಕ ದೇರಣ್ಣಗೌಡ, ಜಾಲ್ಸೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಬು, ಹಿರಿಯ ಕ್ಯಾನ್ಸರ್ ತಜ್ಞ ಡಾಕ್ಟರ್ ರಘು, ಸುಳ್ಯ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ಸುಂದರ್ ರಾಜ್, ಸುದ್ದಿ ಸಮೂಹ ಸಂಸ್ಥೆಯ ವ್ಯವಸ್ಥಾಪಕ ಯಶ್ವಿತ್ ಕಾಳ ಮ್ಮನೆ, ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ, ಜಾಲ್ಸೂರು ಗ್ರಾಮ ಪಂಚಾಯತ್ ಸದಸ್ಯರುಗಳು, ಅಂಬೇಡ್ಕರ್ ರಕ್ಷಣಾ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಅಡ್ಕಬಳೆ, ಪತ್ರಕರ್ತ ಸತೀಶ ಹೊದೆಟ್ಟಿ, ಸುದ್ದಿ ಪತ್ರಿಕೆಯ ವರದಿಗಾರ ಹಸೈನಾರ್ ಜಯನಗರ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.