Breaking News

ಚೊಕ್ಕಾಡಿ: ದೇಸೀ ಹಾಗೂ ಮಿಶ್ರ ತಳಿ ಹೆಣ್ಣು ಕರು ಮತ್ತು ಕಡಸುಗಳ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

Advt_Headding_Middle

ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ, ಶ್ರೀರಾಮ ದೇವಾಲಯ ಚೊಕ್ಕಾಡಿ, ಲ್ಯಾಂಪ್ ಸೊಸೈಟಿ ಸುಳ್ಯ, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಕುಕ್ಕುಜಡ್ಕ, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಬಾಳಿಲ, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಕಳಂಜ ಇವುಗಳ ಸಹಯೋಗದೊಂದಿಗೆ ದೇಸೀ ಹಾಗೂ ಮಿಶ್ರ ತಳಿ ಹೆಣ್ಣು ಕರು ಮತ್ತು ಕಡಸುಗಳ ಪ್ರದರ್ಶನ, ರೈತರಿಗೆ ಮಾಹಿತಿ ಶಿಬಿರ ಹಾಗೂ ಬರಡು ರಾಸು ಚಿಕಿತ್ಸಾ ಶಿಬಿರ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಸಭಾ ಭವನದಲ್ಲಿ ಅ. 3ರಂದು ನಡೆಯಿತು.
ಕಾರ್ಯಕ್ರಮವನ್ನು ಸಚಿವ ಎಸ್. ಅಂಗಾರ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರಪಡ್ನೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಪ್ರಸನ್ನ ಕುಮಾರ್ ಟಿ.ಜಿ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಚೂಂತಾರು, ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಶ್ರೀಮತಿ ಪಾರ್ವತಿ ನೇಣಾರು, ಕುಕ್ಕುಜಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ತಿರುಮಲೇಶ್ವರ ಕೆ, ಕಳಂಜ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರುಕ್ಮಯ್ಯ ಗೌಡ ಕಳಂಜ ಭಾಗವಹಿಸಿದ್ದರು. ಪಾರ್ವತಿ ನೇಣಾರು ಪ್ರಾರ್ಥಿಸಿದರು. ಸುಳ್ಯ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ನಿತಿನ್ ಪ್ರಭು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಬೆಳ್ಳಾರೆ ಪಶು ವೈದ್ಯಾಧಿಕಾರಿ ಡಾ. ಸೂರ್ಯನಾರಾಯಣ ಭಟ್ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.