Breaking News

ಅ. 7 – ಅ. 15 : ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ, ವಿಜಯದಶಮಿ ಮತ್ತು ಚಂಡಿಕಾಯಾಗ ಮಹೋತ್ಸವ

Advt_Headding_Middle

ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ, ವಿಜಯದಶಮಿ ಕಾರ್ಯಕ್ರಮವು ಅ. 7 – ಅ. 15ರವರೆಗೆ ನಡೆಯಲಿರುವುದು. ಅ. 12ರಂದು ಚಂಡಿಕಾ ಯಾಗವು ನಡೆಯಲಿರುವುದು.
ಅ. 7ರಂದು ಬೆಳಿಗ್ಗೆ ಗಣಪತಿ ಹವನ, ಗುರುಪೂಜೆ ನಡೆಯಲಿರುವುದು. ಪ್ರತಿ ದಿನ ಮಧ್ಯಾಹ್ನ ಮಹಾಪೂಜೆ, ಸಂಜೆ ದೀಪಾರಾಧನೆ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಶ್ರೀ ದುರ್ಗಾ ನಮಸ್ಕಾರ ಪೂಜೆ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿರುವುದು. ಅ. 12ರಂದು ಬೆಳಿಗ್ಗೆ 8ಗಂಟೆಯಿಂದ ಚಂಡಿಕಾಯಾಗ ನಡೆಯಲಿರುವುದು ಬೆಳಿಗ್ಗೆ 11 ಗಂಟೆಯಿಂದ ಸಣ್ಣ ಮಕ್ಕಳಿಗೆ ಅಕ್ಷರಾಭ್ಯಾಸ, ವಿದ್ಯಾರಂಭ ನಡೆಯಲಿರುವುದು. ಅ. 14ರಂದು ಬೆಳಿಗ್ಗೆ ಶ್ರೀ ಮಹಾಗುರು ಕಾಲಭೈರವೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ನಡೆಯಲಿರುವುದು. ಅ. 15ರಂದು ಬೆಳಿಗ್ಗೆ ಭಜನಾ ಕಾರ್ಯಕ್ರಮ, ವಿಜಯದಶಮಿ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಯೊಂದಿಗೆ ಉತ್ಸವವು ಸಂಪನ್ನಗೊಳ್ಳುವುದು ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.