Breaking News

ಶೌಚಾಲಯದಲ್ಲಿ ಇಣುಕಿ ವಿದ್ಯಾರ್ಥಿನಿಯರ ಮೊಬೈಲ್ ಚಿತ್ರೀಕರಣ ಮಾಡಿರುವ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ

Advt_Headding_Middle

 

 

ಸುಳ್ಯ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರ ಶೌಚಾಲಯದ ಬಳಿ ಬಂದು ಇಣುಕಿ ನೋಡಿ ತನ್ನ ಮೊಬೈಲ್ ನಲ್ಲಿ ವಿದ್ಯಾರ್ಥಿನಿಯರ ಭಾವಚಿತ್ರ ಹಾಗೂ ವಿಡಿಯೋ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಮ್ಮದ್ ಇರ್ಷಾದ್ ಎಂಬಾತನ ವಿರುದ್ಧ 2017ರಲ್ಲಿ ಐಪಿಸಿ ಕಲಂ 354(c) ಅನ್ವಯ ಪ್ರಕರಣ ದಾಖಲಿಸಿ ಅಂದಿನ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ರಾದ ಚಂದ್ರಶೇಖರ್ ಎಚ್ ಸುಳ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ್ ಆರೋಪಿ ಎಸಗಿರುವ ಅಪರಾಧಕ್ಕೆ ಒಂದು ವರ್ಷ ಕಾರಾಗೃಹ ವಾಸ ಮತ್ತು ಹತ್ತು ಸಾವಿರ ರೂಪಾಯಿಗಳ ದಂಡ ವಿಧಿಸಿ ಆದೇಶ ನೀಡಿದ್ದಾರೆ. ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ ಒಂದು ತಿಂಗಳ ಸಾದಾ ಕಾರಾಗೃಹವಾಸ ಅನುಭವಿಸುವಂತೆ ತೀರ್ಪಿನಲ್ಲಿ ಹೇಳಲಾಗಿದೆ. ಈ ಪ್ರಕರಣದಲ್ಲಿ ನೊಂದ ಬಾಲಕಿಗೆ ದಂಡದ ಮೊತ್ತ ಹತ್ತು ಸಾವಿರ ರೂಪಾಯಿ ಗಳಲ್ಲಿ ಎಂಟು ಸಾವಿರ ರೂಪಾಯಿಯನ್ನು ಪರಿಹಾರವಾಗಿ ನೀಡುವಂತೆ ಸೂಚಿಸಿರುತ್ತಾರೆ.
ಈ ಪ್ರಕರಣದಲ್ಲಿ ಅಭಿಯೋಜನಾ ಪರವಾಗಿ ಸುಳ್ಯ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಜನಾರ್ಧನ್ ಬಿ ಸಾಕ್ಷಿಗಳ ವಿಚಾರಣೆ ನಡೆಸಿ ವಾದವನ್ನು ಮಂಡಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.