ಮುಕ್ಕೂರು : ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಣೆ, ಅಭಿವೃದ್ಧಿ ಸಭೆ

Advt_Headding_Middle

 

ಹೆತ್ತವರ ಹೆಸರಿನಲ್ಲಿ ದತ್ತಿನಿಧಿ ಸ್ಥಾಪನೆ : ಸುಬ್ರಾಯ ಭಟ್ ನೀರ್ಕಜೆ

ಒಳ್ಳೆಯ ಕೆಲಸಕ್ಕೆ ಊರಿನವರು ಬೆಂಬಲ ನೀಡುತ್ತಾರೆ : ಜಗನ್ನಾಥ ಪೂಜಾರಿ ಮುಕ್ಕೂರು

ಮುಕ್ಕೂರು ಶಾಲೆ ಸಾಧಕರನ್ನು ನಾಡಿಗೆ ಕೊಡುಗೆ ನೀಡಿದೆ : ಸುಧಾಕರ ರೈ ಕುಂಜಾಡಿ

ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದತ್ತಿನಿಧಿಯೊಂದನ್ನು ತನ್ನ ಹೆತ್ತವರ ಹೆಸರಿನಲ್ಲಿ ಸ್ಥಾಪಿಸುವುದಾಗಿ ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ ಹೇಳಿದರು.

ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.5 ರಂದು ನಡೆದ ದತ್ತಿನಿಧಿ ವಿತರಣೆ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ದತ್ತಿನಿಧಿ ಸ್ಥಾಪಿಸುವ ಬಗ್ಗೆ ಹಲವು ವರ್ಷಗಳಿಂದ ಮನಸ್ಸಿನಲ್ಲಿತ್ತು. ಅದಕ್ಕೆ ಈಗ ಕಾಲ ಕೂಡಿ ಬಂದಿದೆ. ಹೆತ್ತವರ ಹೆಸರಿನಲ್ಲಿ ದತ್ತಿನಧಿ ಸ್ಥಾಪಿಸಿ ಹತ್ತು ಸಾವಿರ ರೂ. ಠೇವಣಿ ಇರಿಸಲಾಗುವುದು. ಇದನ್ನು ಶಾಲಾ ಶೈಕ್ಷಣಿಕ ವರ್ಷದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ನೀಡುವಂತೆ ಹೇಳಿದ ಅವರು, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ತಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ನೇಸರ ಯುವಕ ಮಂಡಲದ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಮಾತನಾಡಿ, ಮುಕ್ಕೂರು ಶಾಲೆ ಶತಮಾನದ ಹೊಸ್ತಿಲಿನಲ್ಲಿದೆ. ಈ ಶಾಲೆಯ ಬೆಳವಣಿಗೆಗೆ ಅನೇಕರ ತ್ಯಾಗ, ಶ್ರಮ ಇದೆ. ಈ ಊರಿನಲ್ಲಿ ಯಾವುದೇ ಕಾರ್ಯಕ್ರಮ ನಡೆಸಿದರೂ ಅದಕ್ಕೆ ಇಲ್ಲಿನ ಜನರು ತನು ಮನ ಧನದ ಸಹಕಾರ ನೀಡುತ್ತಾರೆ. ಹೀಗಾಗಿ ಶಾಲೆಯ ಮುಂದಿನ ಬೆಳವಣಿಗೆ ನಿಟ್ಟಿನಲ್ಲಿ ಎಸ್ಡಿಎಂಸಿ ಜತೆ ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.

ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ ಮಾತನಾಡಿ, ಮಕ್ಕಳಿಗೆ ಪ್ರೋತ್ಸಾಹ ನೀಡಿದರೆ ಉತ್ತಮ ಸಾಧನೆ ನೀಡಲು ಸಾಧ್ಯವಿದೆ. ಮುಕ್ಕೂರು ಶಾಲೆ ಹಲವು ಪ್ರತಿಭಾವಂತರನ್ನು ರೂಪಿಸಿದೆ. ಹಲವು ಸಾಧಕರನ್ನು ನಾಡಿಗೆ ಪರಿಚಯಿಸಿದ ಹಿರಿಮೆ ಹೊಂದಿದೆ. ಈ ಶಾಲೆ ಇನ್ನಷ್ಟು ಎತ್ತರಕ್ಕೆ ಏರಲು ನಾವೆಲ್ಲರೂ ಪಣ ತೊಡೋಣ ಎಂದರು.

ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ರೈ ಕಾಪು ಮಾತನಾಡಿ, ಮಕ್ಕಳ ರೂಪದಲ್ಲಿ ದೇವರನ್ನು ಕಾಣಲು ಸಾಧ್ಯವಿದೆ. ಅಂತಹ ಮುಗ್ದ ಮಕ್ಕಳ ಮನಸ್ಸನ್ನು ತಿದ್ದಿ ತೀಡಿ ಸಮಾಜದಲ್ಲಿ ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸುವಲ್ಲಿ ಶಾಲೆಯ ಪಾತ್ರ ಮಹತ್ವದ್ದು. ಆ ನಿಟ್ಟಿನಲ್ಲಿ ಮುಕ್ಕೂರು ಶಾಲೆ ಮಾದರಿ ಸಂಸ್ಥೆಯಾಗಿ ಬೆಳಗಲಿ ಎಂದರು.

ಶಾಲಾ ಎಸ್ಡಿಎಂಸಿ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಪ್ರತಿ ಮನೆಯವರು ಭಾಗಿಧಾರಿಗಳಾಗಬೇಕು ಎನ್ನುವ ಅಪೇಕ್ಷೆ ನಮ್ಮೆಲ್ಲರದು. ದತ್ತಿನಿಧಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಬೆಂಬಲ ನೀಡಿದ್ದಿರಿ. ಮುಂದಿನ ಚಟುವಟಿಕೆಗಳಿಗೂ ಪ್ರೋತ್ಸಾಹ ಅತ್ಯಗತ್ಯ ಎಂದರು.

ನಿವೃತ್ತ ಬ್ಯಾಂಕ್ ಉದ್ಯೋಗಿ ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ ಮಾತನಾಡಿದರು. ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಚಂದ್ರಾವತಿ ಇಟ್ರಾಡಿ, ಸದಸ್ಯೆ ಗುಲಾಬಿ ಬೊಮ್ಮೆಮಾರು, ಎಸ್ಡಿಎಂಸಿ ಉಪಾಧ್ಯಕ್ಷೆ ಸುಮತಿ ರೈ, ಸುಬ್ರಹ್ಮಣ್ಯ ಒರುಂಕು, ಲೀಲಾವತಿ ಅಡ್ಯತಕಂಡ ಉಪಸ್ಥಿತರಿದ್ದರು. ಪ್ರಭಾರ ಮುಖ್ಯಗುರು ವಸಂತಿ ಸ್ವಾಗತಿಸಿ, ಸಹ ಶಿಕ್ಷಕಿ ಲತಾ ವಂದಿಸಿದರು. ಸಹ ಶಿಕ್ಷಕಿ ಆರತಿ ನಿರೂಪಿಸಿದರು. ಸಂಘ ಸಂಸ್ಥೆಗಳ ಪರವಾಗಿ ನೇಸರ ಯುವಕ ಮಂಡಲದ ಕಾರ್ಯದರ್ಶಿ ಶಶಿಕುಮಾರ್ ಬಿ.ಎನ್., ಮಹೇಶ್ ಕುಂಡಡ್ಕ, ಯುವಸೇನೆ ಅಧ್ಯಕ್ಷ ಸಚಿನ್ ರೈ ಪೂವಾಜೆ ಮೊದಲಾದವರು ಉಪಸ್ಥಿತರಿದ್ದರು.

ಅ.9 : ಅಭಿವೃದ್ಧಿ ಕುರಿತು ಸಮಾಲೋಚನಾ ಸಭೆ
ಮುಕ್ಕೂರು ಶಾಲಾ ಅಭಿವೃದ್ಧಿ ಚಟುವಟಿಕೆಗಳ ಕುರಿತಂತೆ ಊರವರ, ಹಳೆ ವಿದ್ಯಾರ್ಥಿಗಳು, ಶಾಲಾ ಹಿತೈಷಿಗಳ ಉಪಸ್ಥಿತಿಯಲ್ಲಿ ಅ.9 ರಂದು ಬೆಳಗ್ಗೆ 10.30ಕ್ಕೆ ಸಮಾಲೋಚನಾ ಸಭೆ ನಡೆಸಲು ನಿರ್ಧರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.