ಎಣ್ಮೂರು: ಎಣ್ಮೂರು ಬೂತ್ ಸಮಿತಿ ಅಧ್ಯಕ್ಷರ ಮನೆಯಲ್ಲಿ ಸಚಿವರಿಂದ ನಾಮಫಲಕ ಅನಾವರಣ

Advt_Headding_Middle

 

ಎಣ್ಮೂರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಯೋಗಾನಂದ ಉಳ್ಳೆಲ್ಲಾಡಿ ಯವರ ಮನೆಗೆ ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಅ. 6ರಂದು ನಾಮಫಲಕ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಮಂಡಲ ಅಧ್ಯಕ್ಷರಾದ ಹರಿಶ್ ಕಂಜಿಪಿಲಿ ಸರಕಾರದಿಂದ ಬರುವ ಸೌಲಭ್ಯಗಳ ಬಗ್ಗೆ ತಿಳಿಸಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ಉದ್ಘ್ಹಾಟಿಸಿ ಮಾತನಾಡಿದ ಸಚಿವರು ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಬರುವ ಸೌಲಭ್ಯ ಗಳನ್ನು ಕಾರ್ಯಕರ್ತರಿಗೆ ತಿಳಿಸಿದರು. ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಶುಭದಾ ರೈ, ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ನಡುಬೈಲು, ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನೂಪ್ ಕುಮಾರ್ ಆಳ್ವ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಭಾಗಿರತಿ ಮುರುಳ್ಯ, ಬೆಳಂದೂರು ಮಹಾಶಕ್ತಿ ಕೇಂದ್ರದ ಯುವಮೋರ್ಚಾದ ಅಧ್ಯಕ್ಷ ವಸಂತ ಹೇಮಳ, ಎಣ್ಮೂರು ಬೂತ್ ಸಮಿತಿ ಅಧ್ಯಕ್ಷರುಗಳಾದ ಯೋಗಾನಂದ ಉಳ್ಳೆಲ್ಲಾಡಿ, ರಘುಪ್ರಸಾದ್ ಶೆಟ್ಟಿ ಎಣ್ಮೂರುಗುತ್ತು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರೇವತಿ ಎಣ್ಮೂರು, ಸದಸ್ಯರಾದ ದಿವ್ಯಾ ಯೋಗಾನಂದ, ಸವಿತಾ ಕಲ್ಲೇರಿ ಈ ಸಂದರ್ಭದಲ್ಲಿ ಉಪಸ್ತಿತರಿದ್ದರು. ಸಚಿವರು ಹಾಗೂ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿಯವರನ್ನು ಹರಿಪ್ರಸಾದ್ ಅಲೆಂಗಾರ ಹಾಗೂ ಜಯರಾಮ ಐಪಳರವರು ಅಭಿನಂದಿಸಿದರು. ಎಣ್ಮೂರಿನ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರನದಲ್ಲಿ ಉಪಸ್ತಿತರಿದ್ದರು. ಎಣ್ಮೂರು ಬಿಜೆಪಿ ಕಾರ್ಯದರ್ಶಿ ಕಾರ್ತಿಕ್ ರೈ ಕಲ್ಲೇರಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.