Breaking News

ಕುಕ್ಕೆ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸುವ ಬಗ್ಗೆ ವಿ.ಹೆಚ್.ಪಿ ಮತ್ತು ಬಜರಂಗದಳ ಮನವಿ

Advt_Headding_Middle

 

 

ಸುಳ್ಯ ವಿಶ್ವಹಿಂದೂ ಪರಿಷದ್, ಬಜರಂಗದಳ ಪ್ರಖಂಡವತಿಯಿಂದ
ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತ ವಸ್ತ್ರ ಗಳನ್ನು ಧರಿಸಿಕೊಂಡು ದೇವಾಲಯವನ್ನು ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸುವಂತೆ ಆಗ್ರಹಿಸಿ ದೇವಾಲಯದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಯಿತು.ಹಿಂದೂ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶಿಸಬೇಕಾಗಿ ಭಕ್ತಾದಿಗಳಿಗೆ ಸೂಚನೆಯನ್ನು ನೀಡಬೇಕೆಂದು ಹಾಗೂ ಪಾಶ್ಚಿಮಾತ್ಯ ಮತ್ತು ದೇಹದ ಅಂಗಾಂಗಗಳನ್ನು ಪ್ರದರ್ಶಿಸುವ ವಿಕೃತ ವಸ್ತ್ರಗಳನ್ನು ಧರಿಸಿ ಬರುವವರಿಗೆ ಪ್ರವೇಶ ನಿರ್ಬಂಧಿಸಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕೆಂಬುದಾಗಿ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ್ ಪೈಕ, ಸುಳ್ಯ ಪ್ರಖಂಡದ ಸಂಚಾಲಕ ಸಂದೀಪ್ ವಳಲಂಬೆ, ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಸುಬ್ರಹ್ಮಣ್ಯ ಘಟಕದ ಅಧ್ಯಕ್ಷ ಅಶೋಕ್ ಆಚಾರ್ಯ, ಸುಬ್ರಹ್ಮಣ್ಯ ಘಟಕದ ಭಜರಂಗದಳ ಸಂಯೋಜಕರ ಮಹೇಶ್ , ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.