ಅ-9; ದುಗಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ಕ್ಷೀರ ಸಂಗಮ ಮತ್ತು ಸಾಂದ್ರ ಶೀತಲೀಕರಣ ಘಟಕ ಉದ್ಘಾಟನ

Advt_Headding_Middle

 

 

ಸಚಿವ ಎಸ್.ಅಂಗಾರ,ಕೆ.ಎಂ.ಎಫ್.ಅಧ್ಯಕ್ಷ ರವಿರಾಜ ಹೆಗ್ಡೆ ಹಾಗೂ ಗಣ್ಯರ ಆಗಮನ

ದುಗಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ಕ್ಷೀರ ಸಂಗಮ ಮತ್ತು ಸಾಂದ್ರ ಶೀತಲಿಕರಣ ಘಟಕ ಅ.9 ರಂದು ಉದ್ಘಾಟನೆಗೊಳ್ಳಲಿದೆ.
ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡವನ್ನು ದುಗಲಡ್ಕ ಪೇಟೆಯಲ್ಲಿ ಆಕರ್ಷಕವಾಗಿ ನಿರ್ಮಿಸಲಾಗಿದ್ದು,ದ.ಕ.ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ರವಿರಾಜ ಹೆಗ್ಡೆ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಸಾಂದ್ರ ಶೀತಲಿಕರಣವನ್ನು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ನಾಮಫಲಕವನ್ನು ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ ಅನಾವರಣ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಒಕ್ಕೂಟದ ನಿರ್ದೇಶಕರುಗಳಾದ ನಿರಂಜನ ಬಾವಂತಬೆಟ್ಟು,ಪದ್ಮನಾಭ ಶೆಟ್ಟಿ ಅರ್ಕಜೆ,ನಾರಾಯಣ ಪ್ರಕಾಶ್ ಕೆ.,ಎಸ್.ಬಿ‌.ಜಯರಾಮ ರೈ,ಶ್ರೀಮತಿ ಸವಿತಾ ಎನ್.ಶೆಟ್ಟಿ,ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ.ಸುರೇಶ್,ಮಾಜಿ.ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ,ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಚೆನ್ನಕೇಶವ ಭಾಗವಹಿಸಲಿದ್ದಾರೆ. ಒಕ್ಕೂಟದ ಶೇಖರಣೆ ಮತ್ತು ತಾಂತ್ರಿಕ ವಿಭಾಗದ ವ್ಯವಸ್ಥಾಪಕ ಡಾ.ನಿತ್ಯಾನಂದ ಭಕ್ತ,ಉಪವ್ಯವಸ್ಥಾಪಕ ಡಾ.ಸತೀಶ್ ರಾವ್, ಸಂಘದ ಸ್ಥಾಪಕಾಧ್ಯಕ್ಷೆ ಶ್ರೀಮತಿ ವಾರಿಜ ಕೊರಗಪ್ಪ ಗೌಡ,ನ.ಪಂ.ಸದಸ್ಯರುಗಳಾದ ಶ್ರೀಮತಿ ಶಶಿಕಲಾ ನೀರಬಿದಿರೆ, ಬಾಲಕೃಷ್ಣ ರೈ ದುಗಲಡ್ಕ, ಕಟ್ಟಡದ ಉಸ್ತುವಾರಿ ವಹಿಸಿಕೊಂಡ ಸಂಘದ ನಿಕಟ ಪೂರ್ವಾಧ್ಯಕ್ಷೆ ಶ್ರೀಮತಿ ಭಾರತಿ ಕೆ.ಎಸ್.,ಸುಳ್ಯ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ನಿತಿನ್ ಪ್ರಭು ಗೌರವ ಉಪಸ್ಥಿತರಿರುತ್ತಾರೆ.
ಸಭಾ ಕಾರ್ಯಕ್ರಮ ದುಗಲಡ್ಕ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದ್ದು,ಎಲ್ಲಾ ಸದಸ್ಯರು,ಊರವರು,ಸಾರ್ವಜನಿಕರು ಭಾಗವಹಿಸಬೇಕೆಂದು ಒಕ್ಕೂಟದ ಉಪವ್ಯವಸ್ಥಾಪಕರಾದ ಡಾ.ಕೇಶವ ಸುಳ್ಳಿ,ಅಧ್ಯಕ್ಷೆ ಶ್ರೀಮತಿ ಜಲಜಾಕ್ಷಿ ಎನ್.ಜಿ.ವಿನಂತಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.