Breaking News

ಕುಂಜತ್ತಾಡಿ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸ

Advt_Headding_Middle


ಬಳ್ಪ ಗ್ರಾಮದ ಕುಂಜತ್ತಾಡಿ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಅ. 7ರಿಂದ ಅ. 15ರ ತನಕ ಅರ್ಚಕರಾದ ರಘುರಾಮ ಅಮ್ಮಣ್ಣಾಯರ ನೇತೃತ್ವದಲ್ಲಿ ಜರಗಲಿದೆ.
ಪ್ರತೀ ದಿನ ಮಧ್ಯಾಹ್ನ ಮತ್ತು ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.


ಅ. 7ರಂದು ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಅ. 8ರಂದು ರಾತ್ರಿ ದುರ್ಗಾ ಪೂಜೆ, ಅ. 9ರಂದು ಸಂಜೆ ದುರ್ಗಾ ನಮಸ್ಕಾರ ಪೂಜೆ, ಅ. 15ರಂದು ಮಹಾನವಮಿ ಮಹೋತ್ಸವ, ಹೊಸ್ತಾರೋಗಣೆ, ಅಕ್ಷರಾಭ್ಯಾಸ ನಡೆಯಲಿದೆ. ಸಂಜೆ 7.00 ಗಂಟೆಯಿಂದ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ದೇವತಾ ಪ್ರಾರ್ಥನೆ, ಮಂತ್ರಾಕ್ಷತೆ ನಡೆಯಲಿದೆ. ರಾತ್ರಿ ಆಯುಧ ಪೂಜೆ ನಡೆಯಲಿದೆ. ಆಡಳಿತ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಕುಂಜತ್ತಾಡಿ ಸೇರಿದಂತೆ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.