Breaking News

ಅ. 14: ಬಾಳಿಲದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ

Advt_Headding_Middle

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ- ಮುಪ್ಪೇರ್ಯ ಇದರ ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ. 14ರಂದು ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ 9.00 ಗಂಟೆಗೆ ಶ್ರೀ ಶಾರದಾ ದೇವಿಯ ವಿಗ್ರಹ ಆಗಮನ. ಬಳಿಕ ಶಾರದಾ ದೇವಿಯ ಪ್ರತಿಷ್ಠಾಪನೆ ನಡೆದು 9.45ಕ್ಕೆ ಸಮಿತಿಯ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಎ.ಕೆ. ನಾಯ್ಕ್ ಅಮೆಬೈಲು, ಚೊಕ್ಕಾಡಿ ಮತ್ತು ಅಶೋಕ್ ಶೆಟ್ಟಿ, ‘ಅರ್ಚನಾ‌ ಬಾಳಿಲ’ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10.30ರಿಂದ ಶ್ರೀ ಸದಾಶಿವ ಭಜನಾ ಮಂಡಳಿ ಆಲೆಟ್ಟಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.15ರಿಂದ ಲಲಿತ ಸಹಸ್ರ ನಾಮ ಪಾರಾಯಣ, ಕುಂಕುಮಾರ್ಚನೆ ನಡೆಯಲಿದೆ. ಬಳಿಕ ಮಂಗಳಾರತಿ, ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಪ್ರಸಾದ ನಡೆಯಲಿದೆ. ಸಂಜೆ 4.00 ಗಂಟೆಗೆ ಶ್ರೀ ಶಾರದಾದೇವಿಯ ಮೆರವಣಿಗೆ ಬಾಳಿಲದಿಂದ ಹೊರಟು ಬೊಮ್ಮನಮಜಲು ಹೊಳೆಯಲ್ಲಿ ಜಲಸ್ಥಂಭನ ನಡೆಯಲಿದೆ.
ಅ. 17ರಂದು ಜನಪ್ರಿಯ ವೈದ್ಯರಾಗಿ ಸೇವೆ ಸಲ್ಲಿಸಿ ಆಕಸ್ಮಕವಾಗಿ ನಿಧನರಾದ ಬಾಳಿಲ ಚಿಕಿತ್ಸಾ ಕ್ಲಿನಿಕ್ ನ ವೈದ್ಯ ಡಾ. ಪಿ.ಜಿ.ಎಸ್. ಪ್ರಕಾಶರ ಸ್ಮರಣಾರ್ಥ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದ್ದು, ರಕ್ತದಾನಿಗಳು ಸಂಘಟಕರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.