Breaking News

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಎಂಬಿ ಫೌಂಡೇಶನ್ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Advt_Headding_Middle

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ತಾಲೂಕು ವಕೀಲರ ಸಂಘ, ಪೊಲೀಸ್ ಇಲಾಖೆ ಸುಳ್ಯ, ಸುದ್ದಿ ಸಮೂಹ ಸಂಸ್ಥೆ ಸುಳ್ಯ ಇದರ ಆಶ್ರಯದಲ್ಲಿ ಎಂಬಿ ಫೌಂಡೇಶನ್ ಸುಳ್ಯ ಇದರ ಸಹಭಾಗಿತ್ವದಲ್ಲಿ ಕಾನೂನು ಅರಿವು ಕಾರ್ಯಕ್ರಮದ ಅಂಗವಾಗಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಸಾಂದೀಪ್ ಶಾಲೆಯ ನೂತನ ಕಟ್ಟಡದಲ್ಲಿ ಇಂದು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಪ್ಪಗೌಡ ವಹಿಸಿದ್ದರು. ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಅಧ್ಯಕ್ಷ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಪ್ತ ಸಮಾಲೋಚಕಿ ಪ್ರಜ್ಞಶ್ರೀ ವಿಶ್ವ ಮಾನಸಿಕ ದಿನಾಚರಣೆ ನಾಗರಿಕರ ಜವಾಬ್ದಾರಿ ಎಂಬ ವಿಷಯದಲ್ಲಿ ಮಾಹಿತಿ ಕಾರ್ಯಗಾರ ನೀಡಿದರು. ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ಬಿ ಕಾನೂನು ಅರಿವು ಕಾರ್ಯಕ್ರಮದ ಜಾಗೃತಿ ಗೀತೆಯನ್ನು ಹಾಡಿದರು. ಕಲಾವಿದ ಕೃಷ್ಣ ರಾಜ್ ಗೀತೆಯನ್ನು ಹಾಡಿ ವಿದ್ಯಾರ್ಥಿಗಳನ್ನು ಮನರಂಜಿಸಿ ಪ್ರೋತ್ಸಾಹಿಸಿದರು. ವೇದಿಕೆಯಲ್ಲಿ ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಆನಂದ ಪೂಜಾರಿ, ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ವರದಿಗಾರ ಹರೀಶ್ ಬಂಟ್ವಾಳ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಸುಳ್ಯ ಸಾಂದೀಪನಿ ಶಾಲೆಯ ನಿರ್ಮಾತೃ ಎಂ ಬಿ ಸದಾಶಿವ, ಹಾಗೂ ಪ್ರಾಂಶುಪಾಲೆ ಹರಿಣಿ ಸದಾಶಿವ ರವರನ್ನು ಸುಳ್ಯ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಎಂಬಿ ಫೌಂಡೇಶನ್ ವತಿಯಿಂದ ಸುಳ್ಯ ಹಿರಿಯ ನ್ಯಾಯಾಧೀಶ ಸೋಮಶೇಖರ್, ವಕೀಲರ ಸಂಘದ ಅಧ್ಯಕ್ಷ ವೆಂಕಪ್ಪ ಗೌಡ, ಎಪಿಪಿ ಜನಾರ್ಧನ್ ರವರಿಗೆ ಕಿರು ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.
ಎಂ ಆರ್ ಡಬ್ಲ್ಯೂ ಪುಟ್ಟಣ್ಣ ವಾಲ್ಕಜೆ ಸ್ವಾಗತಿಸಿ, ಹರಿಣಿ ಸದಾಶಿವ ವಂದಿಸಿದರು. ಸುಳ್ಯ ನ್ಯಾಯಾಲಯದ ಸಿಬ್ಬಂದಿಗಳಾದ ರಕ್ಷಿತಾ, ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ಪೋಷಕರು, ಶಾಲಾ ಶಿಕ್ಷಕ ವೃಂದದವರು, ಶಾಲಾ ಸಹಾಯಕಿಯರು,ಎಮ್ ಆರ್ ಡಬ್ಲ್ಯೂ,ವಿ ಆರ್ ಡಬ್ಲ್ಯೂ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುಂದರ ಪಾಟಾಜೆ, ಕಾರ್ಯದರ್ಶಿ ರಾಜೇಶ್ ಕಜೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾ ಅಧ್ಯಕ್ಷ ಉನೈಸ್ ಪೆರಾಜೆ, ಹಿರಿಯರಾದ ನೇತ್ರಾವತಿ ಪಡ್ಡಂಬೈಲು, ಸುಳ್ಯ ತಾಲೂಕು ಕಾರ್ಮಿಕ ಸಂಘಟನೆಯ ಉಪಾಧ್ಯಕ್ಷ ಮಂಜುನಾಥ್ ಬಳ್ಳಾರಿ, ಮೊದಲಾದವರು ಭಾಗವಹಿಸಿದ್ದರು. ಸುದ್ದಿ ಪತ್ರಿಕೆಯ ವರದಿಗಾರ ಹಸೈನಾರ್ ಜಯನಗರ, ಸಾಂದೀಪನಿ ಶಾಲೆಯ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.