Breaking News

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ವಿಶ್ವ ಹೆಣ್ಣು ಮಗುವಿನ ದಿನಾಚರಣೆ

Advt_Headding_Middle

ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ, ಸುದ್ದಿ ಸಮೂಹ ಸಂಸ್ಥೆ ಸುಳ್ಯ, ಇವುಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮದ ಅಂಗವಾಗಿ ಶ್ರೀ ಸತ್ಯಸಾಯಿ ಶಾಲೆ ಚೊಕ್ಕಾಡಿ ಇದರ ಸಹಭಾಗಿತ್ವದಲ್ಲಿ ಇಂದು ವಿಶ್ವ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಸತ್ಯಸಾಯಿ ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸುಳ್ಯ ನ್ಯಾಯಾಲಯದ ಕಿರಿಯ ಸಿವಿಲ್ ನ್ಯಾಯಾಧೀಶರಾದ ಯಶ್ವಂತ್ ಕುಮಾರ್ ಕೆ ವಿಶ್ವ ಹೆಣ್ಣು ಮಗುವಿನ ದಿನಾಚರಣೆಯನ್ನು ಅಕ್ಟೋಬರ್ ೧೧ರಂದು ಆಚರಿಸಲಾಗುತ್ತಿದ್ದು ಇಂದು ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಕಾನೂನು ಅರಿವು ನೀಡುವ ಮೂಲಕ ಹೆಣ್ಣು ಮಕ್ಕಳಲ್ಲಿ ಧೈರ್ಯ ತುಂಬುವ ಕೆಲಸ ಈ ಕಾರ್ಯಕ್ರಮದ ಮೂಲಕ ನಡೆಯುತ್ತಿದೆ ಎಂದು ಹೇಳಿದರು. ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ, ಅಸಮಾನತೆ ಸಂಪೂರ್ಣವಾಗಿ ನಿರ್ಮೂಲನೆ ಆಗದೇ ಇರುವುದು ನಮ್ಮ ದೌರ್ಭಾಗ್ಯ. ಹೆಣ್ಣು ಮಕ್ಕಳನ್ನು ಅಸಮಾನತೆಯ ದೃಷ್ಟಿಯಿಂದ ನೋಡುತ್ತಿರುವುದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ. ಆದರೆ ಪ್ರಸ್ತುತ ಸಂದರ್ಭದಲ್ಲಿ ಹೆಣ್ಣು ಮಕ್ಕಳು ನಾವು ಗಂಡು ಮಕ್ಕಳಿಗಿಂತ ಯಾವುದೇ ಕಮ್ಮಿ ಇಲ್ಲ ಎಂಬ ರೀತಿಯಲ್ಲಿ ವಿವಿಧ ಸಾಧನೆಗಳನ್ನು ನಿರ್ಮಿಸುವ ಮೂಲಕ ಸಮಾಜದಲ್ಲಿ ಬೆಳೆದು ಬರುತ್ತಿದ್ದಾರೆ ಎಂದು ಅವರು ಹೇಳಿದರು. ಹೆಣ್ಣು ಮಕ್ಕಳ ರಕ್ಷಣೆಗಾಗಿ ಕಾನೂನಿನಲ್ಲಿ ಹಲವಾರು ಸೌಲಭ್ಯಗಳಿದ್ದು ಅದರ ಅವಶ್ಯಕತೆ ಬಂದಾಗ ಸಂಪೂರ್ಣವಾಗಿ ಅವುಗಳನ್ನು ಉಪಯೋಗಿಸಿಕೊಳ್ಳುವಂತೆ ಕರೆ ನೀಡಿದರು.
ಶ್ರೀ ಸತ್ಯಸಾಯಿ ಶಾಲೆಯ ವಿದ್ಯಾರ್ಥಿನಿಯರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಪ್ಪಗೌಡ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುಳ್ಯ ಸಾಂದೀಪ್ ವಿಶೇಷ ಶಾಲೆಯ ಪ್ರಾಂಶುಪಾಲೆ ಹರಿಣಿ ಸದಾಶಿವ ವಿಶ್ವ ಹೆಣ್ಣು ಮಗುವಿನ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರ ನೀಡಿ ಹೆಣ್ಣು ಮಕ್ಕಳು ಸ್ವಯಂ ಜಾಗೃತಿ ಗೊಳ್ಳಬೇಕು. ಪ್ರಸ್ತುತ ಸಂದರ್ಭದಲ್ಲಿ ಅತಿ ಹೆಚ್ಚಾಗಿ ದೌರ್ಜನ್ಯಗಳು, ಬಲತ್ಕಾರ ಗಳು, ಶೋಷಣೆಗಳು ಹೆಣ್ಣುಮಕ್ಕಳ ಮೇಲೆ ನಡೆಯುತ್ತಿದ್ದು ಇದಕ್ಕೆ ಕಾರಣ ಲಿಂಗ ತಾರತಮ್ಯ ವಾಗಿದೆ. ಪ್ರತಿಯೊಬ್ಬ ಗಂಡು ಮಕ್ಕಳಲ್ಲಿ ಹೆಣ್ಣುಮಕ್ಕಳ ಮೇಲೆ ಸಹೋದರತ್ವ ಬಾಂಧವ್ಯ ಮೂಡಿದರೆ ಮಾತ್ರ ಹೆಣ್ಣು ರಕ್ಷಣೆ ಹೊಂದಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳಲ್ಲಿ ಸಾಧನೆ ಮಾಡುವ ಛಲ ಗಳು ಬೆಳೆಯುತ್ತಿದ್ದು ಅಂಗವಿಕಲತೆ ಹೊಂದಿರುವ ಹೆಣ್ಣು ಮಗಳು ಐಎಎಸ್ ಪದವಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅದೇ ರೀತಿ ದೇಶದ ವಿವಿಧ ಭಾಗಗಳಲ್ಲಿ ಸಾಧನೆ ಮಾಡಿರುವ ಹೆಣ್ಣುಮಕ್ಕಳ ಅಂಕಿಅಂಶಗಳನ್ನು ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರಿಗೆ ಛಲ ಮತ್ತು ದೃಢತೆಯನ್ನು ಕಾಪಾಡಿಕೊಳ್ಳಲು ಧೈರ್ಯ ತುಂಬಿದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಬೆಳ್ಳಾರೆ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಗಳಿಂದ ಬರುವ ಕೆಲವು ಸಂದೇಶಗಳ ಹಿಂದೆ ಹೆಣ್ಣುಮಕ್ಕಳು ಮರುಳಾಗಿ ತಮ್ಮ ಜೀವನವನ್ನು ನಾಶದತ್ತ ಕೊಂಡೊಯ್ಯುತ್ತಿರುವುದು ದುರದೃಷ್ಟಕರ ಎಂದು ಹೇಳಿದರು. ಪರೀಕ್ಷೆಗಳಲ್ಲಿ ಸೋತಾಗ ಆತ್ಮಹತ್ಯೆಗೆ ಪ್ರಯತ್ನಿಸುವುದು ಶುದ್ಧ ಮೂರ್ಖತನ ಎಂದು ಹೇಳಿದ ಅವರು ಶೂನ್ಯದಿಂದಲೇ ಮೇಲೆ ಬರಬೇಕು ಎಂದು ಕಿವಿಮಾತು ನೀಡಿದರು.
ಅಧ್ಯಕ್ಷೀಯ ಮಾತನಾಡಿದ ಎಂ ವೆಂಕಪ್ಪಗೌಡ ಹೆಣ್ಣುಮಕ್ಕಳು ಯಾವುದೇ ಕಷ್ಟ ಸಂದರ್ಭದಲ್ಲಿ ಧೃತಿಗೆಡದೆ ಜೀವನವನ್ನು ಜಯದತ್ತ ಕೊಂಡೊಯ್ಯಬೇಕು ಎಂದು ಹೇಳಿದರು. ಆರತಿಗೆ ಒಬ್ಬಳು ಎಂಬ ನುಡಿ ಈಗಿನ ಕಾಲದಲ್ಲಿ ಸತ್ಯವಾಗಿದೆ ಎಂದು ಹೇಳಿದ ಅವರು ಕೀರ್ತಿ ಮತ್ತು ಆರತಿ ಹೆಣ್ಣು ಮಕ್ಕಳಿಂದಲೇ ಆಗುತ್ತಿದೆ ಎಂದು ಹೇಳಿದರು.
ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ದನ್ ಕಾನೂನು ಅರಿವು ಗೀತೆಯನ್ನು ರಚಿಸಿ ಹಾಡಿ ಸೇರಿದ ವಿದ್ಯಾರ್ಥಿನಿಯರ ಮನರಂಜಿಸಿ ಪ್ರೋತ್ಸಾಹಿಸಿದರು.
ವೇದಿಕೆಯಲ್ಲಿ ಶಾಲೆಯ ಅಧ್ಯಕ್ಷ ಲಕ್ಷ್ಮಿ ನಾರಾಯಣ ಕೋಟೆ, ಶಾಲಾ ಮುಖ್ಯೋಪಾಧ್ಯಾಯ ಗುಣಶೇಖರ ಭಟ್, ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಹಸೈನಾರ್ ಜಯನಗರ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹರಿಣಿ ಸದಾಶಿವ, ಹಾಗೂ ಕಾರ್ಯಕ್ರಮ ನಡೆಸಲು ಅವಕಾಶ ನೀಡಿದ ಶಾಲಾ ಅಧ್ಯಕ್ಷ ಲಕ್ಷ್ಮೀನಾರಾಯಣ ಕೋಟೆ ಇವರನ್ನು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮುಖ್ಯೋಪಾಧ್ಯಾಯ ಗುಣಶೇಖರ ಭಟ್ ಸ್ವಾಗತಿಸಿ, ಕನ್ನಡ ಪ್ರಾಧ್ಯಾಪಕ ವೆಂಕಟಗಿರಿ ವಂದಿಸಿದರು. ಹಿಂದಿ ಶಿಕ್ಷಕ ಶಂಕರ್ ಕಾರ್ಯಕ್ರಮ ನಿರೂಪಿಸಿ, ಸುಳ್ಯ ನ್ಯಾಯಾಲಯದ ಸಿಬ್ಬಂದಿಗಳಾದ ರಕ್ಷಿತಾ, ಲಾವಣ್ಯ, ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.