ಬಾಳೆಗುಡ್ಡೆ ಕುಂಞಣ್ಣ ನಾಯ್ಕರ ಮನೆಯಲ್ಲಿ ಅಬಕಾರಿ ಉಪ ಆಯುಕ್ತ ಡಾ. ಸಿ.ಹೆಚ್. ಬಾಲಕೃಷ್ಣರಿಗೆ ಸನ್ಮಾನ

Advt_Headding_Middle

 

ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತರಾಗಿ ನಿಯೋಜನೆಗೊಂಡ ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಡಾ. ಬಾಲಕೃಷ್ಣ ಸಿ.ಹೆಚ್.ರವರನ್ನು ಬಾಳೆಗುಡ್ಡೆ ಕುಂಞಣ್ಣ ನಾಯ್ಕರ ಮನೆಯಲ್ಲಿ ಅ. 19ರಂದು ಶ್ರೀದೇವಿಯ ಅಂಗಾರೆ ಪೂಜೆಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಬೆಂಗಳೂರಿನ ಕಾರ್ಮಿಕ ಇಲಾಖೆಯಲ್ಲಿ ಸಹಾಯಕ ಮತ್ತು ಉಪ ಕಾರ್ಮಿಕ ಆಯುಕ್ತರಾಗಿ ಹಲವಾರು ವರ್ಷಗಳ ಕಾಲ‌ ಸೇವೆ ಸಲ್ಲಿಸಿ ಬಳಿಕ‌ ಉಚ್ಚ ನ್ಯಾಯಾಲಯದ ಆದೇಶದನ್ವಯ ಅಬಕಾರಿ ಇಲಾಖೆಯಲ್ಲಿ ನಿಯೋಜನೆಗೊಂಡು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಇದೀಗ ಅಬಕಾರಿ ಇಲಾಖೆಯ ಶಿವಮೊಗ್ಗ ಜಿಲ್ಲಾ ಉಪ ಆಯುಕ್ತರಾಗಿ ಸರಕಾರದಿಂದ ನಿಯೋಜನೆಗೊಂಡ ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಬಾಳೆಗುಡ್ಡೆ ನಾರಾಯಣ ನಾಯ್ಕ ಬೀಟಿಗೆ ಅಭಿನಂದನಾ ಮಾತುಗಳನ್ನಾಡಿದರು. ಕುಂಞಣ್ಣ ನಾಯ್ಕ್ ಬಾಳೆಗುಡ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ಸುದ್ದಿ‌ ಪತ್ರಿಕೆಯ ವರದಿಗಾರ ಈಶ್ವರ ವಾರಣಾಶಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಾಳೆಗುಡ್ಡೆ ಕುಂಞಣ್ಣ ನಾಯ್ಕರ ಕುಟುಂಬದ ಸದಸ್ಯರು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.