ವಿವಿಧ ಬೇಡಿಕೆ ಈಡೇರಿಕೆಗಾಗಿ ಶಿಕ್ಷಕರ ಸಂಘದಿಂದ ಪ್ರತಿಭಟನೆ

Advt_Headding_Middle

ತಾಲೂಕಿನಾದ್ಯಂತ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಯಲ್ಲಿ ಭಾಗಿಗಳಾದ ಪ್ರಾಥಮಿಕ ಶಾಲಾ ಶಿಕ್ಷಕರು


ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸುತ್ತಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮೂರು ತಿಂಗಳಿನಿಂದ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಇಂದು ತಾಲೂಕಿನಾದ್ಯಂತ ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಶಿಕ್ಷಕರ ಬೇಡಿಕೆಗಳಾದ ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯಗುರುಗಳಿಗೆ 15, 20, 25 ವರ್ಷಗಳ ವೇತನ ಬಡ್ತಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಸಮಸ್ಯೆ ಹೀಗೆ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿರಿಸಿಕೊಂಡು ಕಳೆದ ಮೂರು ತಿಂಗಳಿನಿಂದ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಅ.21 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆದಿದ್ದು ತಾಲೂಕಿನಲ್ಲಿಯೂ ಎಲ್ಲಾ ಶಿಕ್ಷಕರು ಪಾಲ್ಗೊಂಡರು ಅ.21 ರಂದು ಸಂಜೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ ಕೆರೆಮೂಲೆ ಯವರ ನೇತೃತ್ವದಲ್ಲಿ ಪದಾಧಿಕಾರಿಗಳಾದ ಪದ್ಮನಾಭ ಅತ್ಯಾಡಿ, ಕುಶಾಲಪ್ಪ ತುಂಬಾತಾಜೆ, ಕುಶಾಲಪ್ಪ ಪಾರೆಪ್ಪಾಡಿ, ಸರೋಜಿನಿ, ಪರಮೇಶ್ವರಿ ಅವರು ಶಿಕ್ಷಣಾಧಿಕಾರಿ ಎಚ್.ಡಿ. ಮಹದೇವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.