ಕುಕ್ಕುಜಡ್ಕ ಶಾಲೆಯ ನಿವೃತ್ತ ಶಿಕ್ಷಕ‌ ಚಂದ್ರಶೇಖರ ಎಂ. ರವರಿಗೆ ಸನ್ಮಾನ

Advt_Headding_Middle

ಕುಕ್ಕುಜಡ್ಕ ಶಾಲೆಯ ನಿವೃತ್ತ ಶಿಕ್ಷಕ‌ ಚಂದ್ರಶೇಖರ ಎಂ. ರವರಿಗೆ ಸನ್ಮಾನಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಶಾಲೆಯ ಸಭಾಂಗಣದಲ್ಲಿ ನಿವೃತ್ತ ಪ್ರಭಾರ ಮುಖ್ಯ ಶಿಕ್ಷಕ ಮತ್ತು ದೈಹಿಕ ಶಿಕ್ಷಕ ಚಂದ್ರಶೇಖರ. ಎಂ ರವರಿಗೆ ವಿದಾಯ ಮತ್ತು ಸನ್ಮಾನ ಸಮಾರಂಭ ಅ.೨೩ ರಂದು ನಡೆಯಿತು.


ಸಮಾರಂಭದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯ ಮೇಲ್ತೋಟ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್.ಪಿ,
ನಿವೃತ್ತ ಮುಖ್ಯ ಶಿಕ್ಷಕ ಸುಬ್ರಾಯ ವಿ, ವಿದ್ಯಾ ಸಂಸ್ಥೆಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು , ಪಂ.ಸದಸ್ಯ ಕೃಷ್ಣ ಪ್ರಸಾದ್ ಮಾಡಬಾಕಿಲು, ನಿವೃತ್ತ ಪ್ರಭಾರ ಮುಖ್ಯ ಶಿಕ್ಷಕ ಚಂದ್ರಶೇಖರ, ಶಿಕ್ಷಕಿ‌ ಶ್ರೀಮತಿ ಜಯಂತಿ, ಶಾಲಾ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ಶಾಲೆಯ ಮುಖ್ಯ ಶಿಕ್ಷಕ ಸಂಕೀರ್ಣ ಎ .ಎಲ್ ರವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಭಾರ ಮುಖ್ಯ ಶಿಕ್ಷಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್‌‌‌.ಎಂ ‌‌ದಂಪತಿ ಯವರನ್ನು ಶಾಲು ಹೊದಿಸಿ ಹಾರಾ ರ್ಪಣೆ ಮಾಡಿ ಫಲಪುಷ್ಪ ಮತ್ತು ಚಿನ್ನದ ಉಂಗುರ ತೊಡಿಸಿ ಸನ್ಮಾನಿಸಲಾಯಿತು. ಶಾಲಾ ಆಡಳಿತ ಮಂಡಳಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕೋಡ್ತುಗುಳಿ ಹಾಗೂ ಮಂಡಳಿಯ ಸದಸ್ಯರು ಹಿತೈಷಿ ಬಂಧುಮಿತ್ರರು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ., ಅದ್ಯಾಪಕ ವೃಂದದವರು ನಿವೃತ್ತ ಶಿಕ್ಷಕ ರನ್ನು ಸನ್ಮಾನಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಸುಬ್ರಾಯ ವಿ ಯವರು ಅಭಿನಂದನಾ ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ರೇಖಾ, ರೀನಾ, ರಚಿತ ರವರು ಪ್ರಾರ್ಥಿಸಿದರು. ಶಾಲೆಯ ಆಡಳಿತ ಮಂಡಳಿಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ಸ್ವಾಗತಿಸಿದರು. ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜಯಶ್ರೀ ಸನ್ಮಾನ ಪತ್ರ ವಾಚಿಸಿದರು. ಶಾಲೆಯ ಆಡಳಿತ ಮಂಡಳಿಯ ನಿರ್ದೇಶಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು,ಶಿಕ್ಷಕ ರಕ್ಷಕ‌ ಸಂಘದ ಸದಸ್ಯರು, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.