ಕೆ. ವಿ. ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯವದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ “ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಮಾಹಿತಿ”

Advt_Headding_Middle

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಅಂಕತಡ್ಕ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಪ್ರಾಯೋಜಿತ ಪಾಲ್ತಾಡಿ ಘಟ ಸಮಿತಿ ಸಹಯೋಗದೊಂದಿಗೆ ಕೆ. ವಿ. ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯವದ ರಾಷ್ಟ್ರೀಯ ಸೇವಾ ಯೋಜನಾ ಘಟಕವು ” ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ- ಜ್ಞಾನವಾಹಿನಿ” ಕಾರ್ಯಕ್ರಮದ ಪ್ರಯುಕ್ತ “ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಮಾಹಿತಿ” ಕಾರ್ಯಕ್ರಮವನ್ನು ಅ. 16 ರಂದು ಸ.ಹಿ.ಪ್ರಾ. ಶಾಲೆ ಅಂಕತಡ್ಕದಲ್ಲಿ ಆಯೋಜಿಸಲಾಯಿತು.
ಈ ಕಾರ್ಯಕ್ರಮವನ್ನು ಕೆ. ವಿ. ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ.ಯವರು ಉದ್ಘಾಟಿಸಿ, ಸಭಿಕರಲ್ಲಿ ಆಯುರ್ವೇದದ ಬಗ್ಗೆ ಅರಿವನ್ನು ಮೂಡಿಸಿದರು. ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ ವನ್ನು ಕಾಲೇಜಿನ ತಜ್ಞವೈದ್ಯರ ತಂಡ ನಡೆಸಿಕೊಟ್ಟರು. ಸುಮಾರು ೮೩ ಆರೋಗ್ಯ ಆಕಾಂಕ್ಷಿಗಳು ಇದರ ಪ್ರಯೋಜನವನ್ನು ಪಡೆದರು. ಕಾರ್ಯಕ್ರಮದಲ್ಲಿ ಎನ್.ಎಸ್. ಎಸ್. ಘಟಕಾಧಿಕಾರಿ ಡಾ. ಪ್ರಮೋದ್ ಪಿ.ಎ. ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.