ಅ.25 ರಿಂದ ಪ್ರಾಥಮಿಕ ಶಾಲೆ ಆರಂಭಕ್ಕೆ ಗೈಡ್‍ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ

Advt_Headding_Middle

 

 

ಕೋವಿಡ್ ಕಾರಣದಿಂದ ಸುಮಾರು 20 ತಿಂಗಳು ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ಅ.25 ರಿಂದ ತೆರೆಯಲಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮಕ್ಕಳು ಕೂಡಾ ಶಾಲೆಗೆ ಹೋಗಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ.

ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿದ್ದು ಪ್ರಾಥಮಿಕ ಶಾಲೆ ಆರಂಭಕ್ಕೆ ಸರ್ಕಾರ ಗೈಡ್‍ಲೈನ್ಸ್ ಬಿಡುಗಡೆ ಮಾಡಿದೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಶಾಲೆಗಳಿಗೆ ಅವಕಾಶ ನೀಡಲಾಗಿದ್ದು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕಾಗಿದೆ . ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸರ್ ಗೆ ಅವಕಾಶ ನೀಡಲಾಗಿದೆ.
ಇನ್ನು ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಲಾಗಿದೆ. ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಬೇಕು. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ದೃಢೀಕರಿಸಬೇಕು. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
ಅಲ್ಲದೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದೆ. 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು. ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.