ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ

Advt_Headding_Middle

ಸಚಿವ ಎಸ್. ಅಂಗಾರರಿಂದ ರೋಡ್ ಶೋ ಮೂಲಕ ಪ್ರಚಾರ

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಅ.30ರಂದು ನಡೆಯಲಿದ್ದು, ಕ್ಷೇತ್ರದಾದ್ಯಂತ ವಿವಿಧ ರಾಜಕೀಯ ಪಕ್ಷಗಳಿಂದ ಭರ್ಜರಿ ಪ್ರಚಾರ ಜರುಗುತ್ತಿದ್ದು, ಅ.25ರಂದು ಸುಳ್ಯ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರು ಬಿಜೆಪಿ ಅಭ್ಯರ್ಥಿ ಪರವಾಗಿ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

ಬಿಜೆಪಿ ಹಿರಿಯ ಮುಖಂಡ ಶಾಸಕರಾಗಿದ್ದ ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಅವರ ಪರವಾಗಿ ಸಚಿವ ಎಸ್.ಅಂಗಾರರು ಭರ್ಜರಿ ರೋಡ್ ಶೋ ನಡೆಸಿದರು.

ಈ ವೇಳೆ ಹಾನಗಲ್ ನ ಅಕ್ಕಿ ಆಲೂರಿನ ಶ್ರೀ ಚನ್ನವೀರೇಶ್ವರ ವಿರಕ್ತ ಮಠಕ್ಕೆ ಭೇಟಿ ನೀಡಿ ಅಲ್ಲಿನ ಮನಿಪ್ರ ಶಿವಬಸವ ಸ್ವಾಮೀಜಿಗಳನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಸಚಿವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಶ್ರೀಮತಿ ಮಾಳವಿಕ ಸೇರಿದಂತೆ ಹಾನಗಲ್ ಕ್ಷೇತ್ರದ ಬಿಜೆಪಿ ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.