ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ

Advt_Headding_Middle

 

ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕಾರ್ಯಕ್ರಮ

ತಾಲೂಕು ಕಾನೂನು ಸಮಿತಿ ಸುಳ್ಯ, ತಾಲೂಕು ಆಡಳಿತ ಸಮಿತಿ,ವಕೀಲರ ಸಂಘ ಸುಳ್ಯ, ಬೆಳ್ಳಾರೆ ಪೊಲೀಸ್ ಇಲಾಖೆ ಸುಳ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ,ಶಿಕ್ಷಣ ಇಲಾಖೆ ಸುಳ್ಯ,ಗ್ರಾಮ ಪಂಚಾಯತ್ ಬೆಳ್ಳಾರೆ, ಸುದ್ದಿ ಸಮೂಹ ಮಾಧ್ಯಮ ಸುಳ್ಯ ಇದರ ಸಹಭಾಗಿತ್ವದಲ್ಲಿ 75ನೇ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಅ.27 ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ ಎ. ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ ವಹಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಎಂಡೋಸಲ್ಫಾನ್ ಸಂತ್ರಸ್ತರ ಮತ್ತು ವೈದ್ಯಕೀಯ ಸೌಲಭ್ಯಗಳ ಸಮಸ್ಯೆಗಳನ್ನು ಪರಿಹರಿಸುವುದರ ಬಗ್ಗೆ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ್ ರವರು ಮಾಹಿತಿ ನೀಡಿದರು.

ಹಿರಿಯ ನಾಗರಿಕ ಹಕ್ಕುಗಳ ಬಗ್ಗೆ ನ್ಯಾಯವಾದಿ ಸುಧಾಕರ ನೆಟ್ಟಾರು ಮಾಹಿತಿ ನೀಡಿದರು.

ವೇದಿಕೆಯಲ್ಲಿ ತಹಶೀಲ್ದಾರ್ ಅನಿತಲಕ್ಷ್ಮೀ,
ಎಪಿಪಿ ಜನಾರ್ಧನ್,ಬೆಳ್ಳಾರೆ , ಸುಳ್ಯ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ನವೀನಚಂದ್ರ ಜೋಗಿ, ಬೆಳ್ಳಾರೆ ಠಾಣೆಯ ಎಸ್.ಐ.ಆಂಜನೇಯ ರೆಡ್ಡಿ, ತಾಲೂಕು ವೈದ್ಯಾಧಿಕಾರಿ ಡಾ.
ನಂದಕುಮಾರ್ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ,ಕೆ.ಪಿ.ಎಸ್.ನ ಉಪಪ್ರಾಂಶುಪಾಲೆ ಉಮಾ ಕುಮಾರಿ, ಮುಖ್ಯ ಗುರುಗಳಾದ ಮಾಯಿಲಪ್ಪ, ಉಪತಹಶೀಲ್ದಾರ್ , ಸುದ್ದಿ ಬಿಡುಗಡೆ ವರದಿಗಾರ ಹಸೈನಾರ್ ಜಯನಗರ ಉಪಸ್ಥಿತರಿದ್ದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕ ರಾಮಚಂದ್ರ ಭಟ್ ಸ್ವಾಗತಿಸಿ, ಬೆಳ್ಳಾರೆ ಠಾಣೆಯ ಎ.ಎಸ್.ಐ.ಭಾಸ್ಕರ್ ಅಡ್ಕಾರು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.