ಬೆಳ್ಳಾರೆ : ಕಾನೂನು ಅರಿವು ಕಾರ್ಯಕ್ರಮದಲ್ಲಿ ಫಲಾನುಭವಿಗಳ ಮನವಿಗೆ ಸ್ಥಳದಲ್ಲಿಯೇ ಸ್ಪಂದಿಸಿದ ಅಧಿಕಾರಿಗಳು

Advt_Headding_Middle

 

 

ಇಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಮತ್ತು ವೈದ್ಯಕೀಯ ಸೌಲಭ್ಯಗಳ ಸಮಸ್ಯೆಗಳನ್ನು ಪರಿಹರಿಸುವುದು, ಹಾಗೂ ಹಿರಿಯ ನಾಗರಿಕರ ಹಕ್ಕುಗಳ ಕಾನೂನು ಅರಿವು ಸಂದರ್ಭ ಸಭೆಯಲ್ಲಿ ಹಾಜರಿದ್ದ ಕೆಲವು ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ಸಂದರ್ಭದಲ್ಲಿ ಸಭೆಯಲ್ಲಿದ್ದ ಅಧಿಕಾರಿಗಳು ಸುಳ್ಯದ ಹಿರಿಯ ನ್ಯಾಯಾಧೀಶ ಸೋಮಶೇಖರ್ ರವರ ಸಮ್ಮುಖದಲ್ಲಿ ಸಂತ್ರಸ್ತರಿಗೆ ಸ್ಪಂದಿಸುವ ಭರವಸೆಯನ್ನು ನೀಡಿದರು.
ಓರ್ವ ಮಹಿಳೆ ತನ್ನ ಐದು ಮಕ್ಕಳು ಎಂಡೋಸಲ್ಫಾನ್ ಕಾಯಿಲೆಗೆ ತುತ್ತಾಗಿ ಸಂಕಷ್ಟದಲ್ಲಿದ್ದು ಅವರಿಗೆ ಮಾಸಿಕ ವೇತನ ವಲ್ಲದೆ ಬೇರೆ ಯಾವುದಾದರೂ ಸರ್ಕಾರಿ ಸೌಲಭ್ಯಗಳು ಬರುತ್ತಿಲ್ಲವೆಂದು ತಮ್ಮ ಅಳಲನ್ನು ತೋಡಿಕೊಂಡರು. ಈ ಸಂದರ್ಭದಲ್ಲಿ ಇದಕ್ಕೆ ಸ್ಪಂದಿಸಿದ ಸುಳ್ಯ ತಹಸಿಲ್ದಾರ್ ಅನಿತಾ ಲಕ್ಷ್ಮಿ ಇವರಿಗೆ ಸಿಗಬಹುದಾದ ಬೇರೆ ಸೌಲಭ್ಯಗಳ ಮಾಹಿತಿ ಪಡೆದು ಸಹಕರಿಸುವುದಾಗಿ ಭರವಸೆಯನ್ನು ನೀಡಿದರು. ಅದೇ ರೀತಿ ಮತ್ತೋರ್ವ ಮಹಿಳೆ ತನ್ನ ಮಗನಿಗೆ ಎಂಡೋಸಲ್ಫಾನ್ ಕಾರಣದಿಂದ ಕಷ್ಟವನ್ನು ಅನುಭವಿಸುತ್ತಿದ್ದು ತನಗೆ ಬೇರೆ ಯಾವುದೇ ಮಾಸಿಕ ವೇತನ ಬರದಿರುವ ಬಗ್ಗೆ ಅಧಿಕಾರಿಗಳ ಬಗ್ಗೆ ಕೇಳಿಕೊಂಡಾಗ ಕೂಡಲೇ ಸ್ಪಂದಿಸಿದ ಅಧಿಕಾರಿಗಳು ಸಂತ್ರಸ್ತ ಮಹಿಳೆಗೆ ವಿಧವಾ ವೇತನದ ಸೌಲಭ್ಯ ಕಲ್ಪಿಸಿಕೊಡುವ ಬಗ್ಗೆ ಭರವಸೆಯನ್ನು ನೀಡಿದರು.
ಮತ್ತೋರ್ವ ಮಹಿಳೆ ತನಗೆ ನಿವೇಶನ ನೀಡುವ ಬಗ್ಗೆ ಕೇಳಿಕೊಂಡಾಗ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಮುಂದಿನ ದಿನಗಳಲ್ಲಿ ನಿವೇಶನ ನೀಡುವ ಸಂದರ್ಭ ಈ ಮಹಿಳೆಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಈ ರೀತಿಯಾಗಿ ಹಿಂದಿನ ಕಾನೂನು ಅರಿವು ಕಾರ್ಯಕ್ರಮದಲ್ಲಿ ಸಂತ್ರಸ್ತರಿಗೆ ತಮ್ಮ ಸಮಸ್ಯೆಗಳಿಗೆ ಸಭೆಯಲ್ಲಿಯೇ ಪರಿಹಾರ ಕಂಡುಕೊಳ್ಳುವ ಅವಕಾಶಗಳು ದೊರಕಿದವು.
ಹಿರಿಯ ನಾಗರಿಕರ ಬಗ್ಗೆ ಮಾತನಾಡಿದ ಅಧಿಕಾರಿಗಳು 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುವ, ಹಾಗೂ ಮಾಹಿತಿ ನೀಡುವ ಕಾರ್ಯಗಾರವನ್ನು ಮುಂದಿನ ದಿನಗಳಲ್ಲಿ ನಡೆಸುವುದಾಗಿ ತಿಳಿಸಿದರು.
ಆರೋಗ್ಯದ ವಿಷಯಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.