ಪಂಜ: ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ

Advt_Headding_Middle

 

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ 2021- 22ರ ವಾರ್ಷಿಕ ಮಹಾಸಭೆಯು ಅ. 28ರಂದು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ.ಕೆ.ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸ್ಕೌಟ್ ಆಯುಕ್ತರಾದ ರಾಮಶೇಷ ಶೆಟ್ಟಿ, ಜಿಲ್ಲಾ ಸಂಸ್ಥೆಯ ಗೈಡ್ ಆಯುಕ್ತರಾದ ಶ್ರೀಮತಿ ಶುಭಾವಿಶ್ವನಾಥ್, ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಜಿ. ಕಜೆ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಕೋವಿಡ್ ಕಾರಣದಿಂದ ಭೌತಿಕ ಚಟುವಟಿಕೆಗಳನ್ನು ನಡೆಸಲು ಅಸಾಧ್ಯವಾಗಿರುವ ಈ ಸಮಯದಲ್ಲಿ ಪಂಜ ಸ್ಥಳಿಯ ಸಂಸ್ಥೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೇ ಮುಂದಿನ ದಿನಗಳಲ್ಲಿ ನಡೆಸಬಹುದಾದ ಚಟುವಟಿಕೆಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.
ಜಿಲ್ಲಾ ಸಂಘಟಕ ಭರತ್ ರಾಜ್ ರಾಜ್ಯ ಸಂಸ್ಥೆಯ ಹಾಗೂ ಜಿಲ್ಲಾ ಸಂಸ್ಥೆಯ ಕಾರ್ಯಸೂಚಿಯನ್ನು ತಿಳಿಸಿದರು.
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ ಮತ್ತು ಪಂಜ, ಎಣ್ಮೂರು ಕ್ಲಸ್ಟರ್ ನ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಯಂತ ಕೆ. ಉಪಸ್ಥಿತರಿದ್ದು, ಶುಭಹಾರೈಸಿದರು.
ಜಿಲ್ಲಾ ಉಪಾಧ್ಯಕ್ಷೆ, ಜಿಲ್ಲಾ ಗೈಡ್ ಸಹಾಯಕ ಆಯುಕ್ತರಾದ ಶ್ರೀಮತಿ ವಿಮಲಾ ರಂಗಯ್ಯ ಮತ್ತು ಜಿಲ್ಲಾ ಸ್ಕೌಟ್ ಸಹಾಯಕ ಆಯುಕ್ತರಾದ ದೇವಿಪ್ರಸಾದ್ ಜಾಕೆ ಭಾಗವಹಿಸಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಉಪಾಧ್ಯಕ್ಷರಾದ ದಾಮೋಧರ ಕೆ. ಉಪಸ್ಥಿತರಿದ್ದರು.
2020-21ರ ಲೆಕ್ಕಪತ್ರವನ್ನು ಹಾಗೂ 2021-22ರ ಆಯವ್ಯಯ ಮುಂಗಡಪತ್ರವನ್ನು ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ವಾಸುದೇವ ನಡ್ಕ ಸಭೆಗೆ ತಿಳಿಸಿ ಅನುಮೋದನೆ ಪಡೆದುಕೊಂಡರು.
2020-21ರ ವಾರ್ಷಿಕ ವರದಿ ಹಾಗೂ 2021-22 ರ ಯೋಜಿತ ಕಾರ್ಯಕ್ರಮಗಳನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ರೈ ಎಸ್. ಸಭೆಗೆ ತಿಳಿಸಿ ಅನುಮೋದನೆ ಪಡೆದುಕೊಳ್ಳುವುದರ ಜೊತೆಗೆ ಕಾರ್ಯಕ್ರಮವನ್ನು ನಿರೂಪಿಸಿದರು.
ಸ್ಥಳೀಯ ಸಂಸ್ಥೆಯ ಸಂಘಟಕ ಲಿಂಗಪ್ಪ ಬಿ. ಸ್ವಾಗತಿಸಿ, ಸ್ಥಳೀಯ ಸಂಸ್ಥೆಯ ಸಹಾಯಕ ಕಾರ್ಯದರ್ಶಿ ಶಿವಪ್ರಸಾದ್ ಜಿ ವಂದನಾರ್ಪಣೆಗೈದರು.
ವಾರ್ಷಿಕ ಮಹಾಸಭೆಯ ಬಳಿಕ ಸ್ಕೌಟ್ ಗೈಡ್ ಶಿಕ್ಷಕರಿಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ- HWB ಸ್ಕೌಟರ್ ಸುಬ್ರಹ್ಮಣ್ಯ ಕೆ ಸಹಕರಿಸಿದರು. ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು, ಸ್ಕೌಟ್ ಗೈಡ್, ಕಬ್, ಬುಲ್ ಬುಲ್ ಶಿಕ್ಷಕರು ಹಾಗೂ ರೋವರ್ ರೇಂಜರ್ ಉಪನ್ಯಾಸಕರು ಭಾಗವಹಿಸಿದ್ದರು.
ಕುಕ್ಕೆ ಸುಬ್ರಹ್ಮಣ್ಯ ಮಹಾವಿದ್ಯಾಲಯದ ರೋವರ್ಸ್ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.