ಅಮರಮುಡ್ನೂರು: ಘನತ್ಯಾಜ್ಯ ವಿಲೇವಾರಿ ಘಟಕ ಸಚಿವರಿಂದ ಉದ್ಘಾಟನೆ- ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ

Advt_Headding_Middle

 

2 ನೇ ಹಂತದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಜಿಲ್ಲಾಧಿಕಾರಿ,ಜಿ.ಪಂ. ಅಧಿಕಾರಿ, ಸಹಾಯಕ ಆಯುಕ್ತರ ಗೈರು

ಅಮರಮುಡ್ನೂರು ಪಂಚಾಯತ್ ವ್ಯಾಪ್ತಿಯ ಪದವು ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಘನತ್ಯಾಜ್ಯ ವಿಲೇವಾರಿ ಘಟಕದ ಉದ್ಘಾಟನಾ ಕಾರ್ಯಕ್ರಮ ಅ. 29ರಂದು ನೆರವೇರಿತು. ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ರವರು ಘಟಕವನ್ನು ಉದ್ಘಾಟಿಸಿದರು. ಕರ್ನಾಟಕ ಸರಕಾರ ಜಾರಿಗೆ ತಂದಿರುವ ಏಕರೂಪದ ಬ್ಯ್ರಾಂಡಿಂಗ್ ಲೋಕಾರ್ಪಣೆ ಮಾಡಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯಾ ಮೇಲ್ತೋಟ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ, ತಹಶೀಲ್ದಾರ್ ಅನಿತಾಲಕ್ಷ್ಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಅಭಿಯಂತರರ ಸುಂದರಯ್ಯ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ಪಿ.ಕೆ, ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ ಕೇನಡ್ಕ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ದನ ಪಿ, ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಕಾಶ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಪಡೆದ ಅರ್ಜಿಗಳ ವಿಲೇವಾರಿಯನ್ನು ಮಾಡಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ತಾ.ಪಂ.ಇ.ಒ ಸ್ವಾಗತಿಸಿದರು. ತಹಶೀಲ್ದಾರ್ ವಂದಿಸಿದರು. ದಯಾನಂದ ಪತ್ತುಕುಂಜ ಕಾರ್ಯಕ್ರಮ ನಿರೂಪಿಸಿದರು.

ಘನತ್ಯಾಜ್ಯ ವಿಲೇವಾರಿ ಘಟಕ ಲೋಕಾರ್ಪಣೆ
ಅಮರಮುಡ್ನೂರು ಪಂಚಾಯತ್ ವ್ಯಾಪ್ತಿಯ ಪದವು ಎಂಬಲ್ಲಿ (ಎಸ್.ಬಿ.ಎಂ ) ಸ್ವಚ್ಛ ಭಾರತ್ ಮಿಷನ್ ಯೋಜನೆ ” ಆಜಾದಿ ಕಾ ಅಮೃತ ಮಹೋತ್ಸವ ” ಯೋಜನೆಯಡಿ ಸುಮಾರು ರೂ. 16 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಸಚಿವರು ರಿಬ್ಬನ್ ಕತ್ತರಿಸಿ ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸುಳ್ಯ ತಹಶಿಲ್ದಾರ್, ತಾ.ಪಂ. ಇ.ಒ, ಪಿ.ಡಿ.ಒ, ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.ಪಂ.ಸದಸ್ಯ ಅಶೋಕ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.

ಫಲಾನುಭವಿಗಳ ಅರ್ಜಿಯ ವಿಲೇವಾರಿ
ಅ. 16 ರಂದು ನಡೆದ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯದಲ್ಲಿ ಅರ್ಜಿ ನೀಡಿದ ಸಾರ್ವಜನಿಕ ಫಲಾನುಭವಿಗಳ ಅರ್ಜಿ ವಿಲೇವಾರಿಯನ್ನು ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಯವರು ವಿತರಿಸಿದರು.

ಬಸ್ ದುರಂತದಲ್ಲಿ ಮೃತ ಪಟ್ಟ ಕುಟುಂಬಕ್ಕೆ 2 ಲಕ್ಷ ಪರಿಹಾರ
ಪಾಣತ್ತೂರು ಬಸ್ ದುರಂತದಲ್ಲಿ ಮಡಿದ ಸೋಣಂಗೇರಿಯ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಮುಖ್ಯ ಮಂತ್ರಿಯವರ ಪರಿಹಾರ ನಿಧಿಯಿಂದ ಸಚಿವರ ಶಿಫಾರಸ್ಸಿನ ಮೇರೆಗೆ ರೂ.2 ಲಕ್ಷದ ಚೆಕ್ ನ್ನು ಈ ಸಂದರ್ಭವಿತರಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ನಾಗರಿಕರ ಪರವಾಗಿ ಸಚಿವ ಎಸ್.ಅಂಗಾರರವರನ್ನು ಗೌರವಿಸಿ ಸನ್ಮಾನಿಸಲಾಯಿತು .
ಒಣ ಕಸ ಸಂಗ್ರಹಕ್ಕಾಗಿ ಪಂಚಾಯತ್ ವತಿಯಿಂದ ಪ್ರತಿ ಮನೆಗೆ ಬೋರೊ ಬ್ಯಾಗನ್ನು ವಿತರಿಸಲಾಯಿತು.

ಜಿಲ್ಲಾಧಿಕಾರಿ ಸಹಿತ ಮುಖ್ಯಾಧಿಕಾರಿಗಳ ಗೈರು

ಅ. 16ರಂದು ಜಿಲ್ಲಾಧಿಕಾರಿಯವರ ಗ್ರಾಮವಾಸ್ತವ್ಯ ಸಂದರ್ಭದಲ್ಲಿ ಮುಂದಿನ ದಿನಾಂಕ ಅಂದರೆ ಅ. 29ರಂದು ಮತ್ತೆ ಗ್ರಾಮ ವಾಸ್ತವ್ಯ ಮಾಡುವ ಬಗ್ಗೆ ದಿನ ನಿಗದಿಪಡಿಸಿತ್ತು. ಅದರಂತೆ ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಲು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಆದರೆ ಕೇಂದ್ರ ಸಚಿವರ ಕಾರ್ಯಕ್ರಮ ಇದ್ದುದರಿಂದ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದ ಪ್ರಕಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಒ, ಸಹಾಯಕ ಆಯುಕ್ತರು ಗೈರಾಗಿದ್ದರು. ಇದರಿಂದ ಅಹವಾಲು ಸಲ್ಲಿಸಲು ಬಂದಿರುವ ಗ್ರಾಮಸ್ಥರಿಗೆ ಗೊಂದಲ ಉಂಟಾಗಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.