ಗಾಂಧಿನಗರ ಕರ್ನಾಟಕ ಪಬ್ಲಿಕ್ ಹೈಸ್ಕೂಲ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ

Advt_Headding_Middle

 

75ನೇ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ಕಾನೂನು ಪ್ರಾಧಿಕಾರದ ವತಿಯಿಂದ ದೇಶದಾದ್ಯಂತ ನಡೆಯುತ್ತಿರುವ ಕಾನೂನು ಅರಿವು ಕಾರ್ಯಕ್ರಮದ ಪೋಸ್ಕೊ ಕಾಯ್ದೆ ಮತ್ತು ಮಾನವ ಕಳ್ಳಸಾಗಾಣಿಕೆ ತಡೆಗಟ್ಟುವಿಕೆ ಎಂಬ ವಿಷಯದ ಕಾನೂನು ಅರಿವು ಕಾರ್ಯಕ್ರಮ ಸುಳ್ಯದ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಇಂದು ನಡೆಯಿತು.
ಈ ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ತಾಲೂಕು ಆಡಳಿತ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಸುದ್ದಿ ಸಮೂಹ ಮಾಧ್ಯಮ ಸಂಸ್ಥೆ ಇದರ ಸಹಭಾಗಿತ್ವದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪಗೌಡ ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತನಾಡಿ ಪೋಸ್ಕೋ ಕಾಯ್ದೆ ಮತ್ತು ಮಾನವ ಕಳ್ಳ ಸಾಗಾಣೆ ತಡೆಗಟ್ಟುವಿಕೆ ಇದರ ಅರಿವು ಪ್ರಸ್ತುತ ಸಂದರ್ಭದಲ್ಲಿ ಅತ್ಯವಶ್ಯಕವಾಗಿದೆ. ಹೆಚ್ಚಾಗಿ ಶಾಲೆಗಳಿಗೆ ಬರುವ ವಿದ್ಯಾರ್ಥಿನಿಗಳು ಈ ಕಾಯ್ದೆಯ ಬಗ್ಗೆ ತಿಳಿದುಕೊಳ್ಳುವುದು ಉತ್ತಮ. ಏಕೆಂದರೆ ಇತ್ತೀಚೆಗೆ ದೇಶದ ವಿವಿಧೆಡೆ ವಿದ್ಯಾರ್ಥಿನಿಯರ ಮೇಲೆ ನಡೆದ ಕೆಲವು ಅತ್ಯಾಚಾರ ಘಟನೆಗಳ ಪ್ರಕರಣಗಳು ಸಮಾಜದಲ್ಲಿ ಎಷ್ಟರಮಟ್ಟಿಗೆ ಕೀಳು ಮಟ್ಟದ, ಹಾಗೂ ಮನುಷ್ಯರು ತಲೆತಗ್ಗಿಸುವ ಹೇಯ ಕೃತ್ಯಗಳು ನಡೆಯುತ್ತಿದೆ ಎಂಬುದು ಮಾಧ್ಯಮಗಳಲ್ಲಿ ಎಲ್ಲರೂ ತಿಳಿದಂತೆ ವಿಷಯವಾಗಿದೆ. ಈ ರೀತಿಯ ಕೆಟ್ಟ ಘಟನೆಗಳಿಂದ ಹೆಣ್ಣು ಮಕ್ಕಳು ತಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ ಅವರಲ್ಲಿ ಜಾಗೃತಿ ಮೂಡಿಸುವುದು ಅಧಿಕಾರಿಗಳಾದ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಈ ರೀತಿಯ ಕಾನೂನು ಅರಿವು ಕಾರ್ಯಕ್ರಮ ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸುತ್ತದೆ ಎಂದು ಅವರು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕೆವಿಜಿ ಕಾನೂನು ಕಾಲೇಜು ಇದರ ಪ್ರಾಂಶುಪಾಲ ಜಯರಾಮ ಇಂದಿನ ಕಾರ್ಯಕ್ರಮದ ಕುರಿತು ಸಭೆಯಲ್ಲಿ ಹಾಜರಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಗಾರ ನಡೆಸಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಹೆಣ್ಣು ಮಕ್ಕಳು ತಮ್ಮ ರಕ್ಷಣೆಯನ್ನು ಯಾವ ರೀತಿ ಮಾಡಿಕೊಳ್ಳಬೇಕು, ಮತ್ತು ಪೋಸ್ಕೋ ಕಾಯಿದೆಯಡಿ ಹಾಗುವ ಶಿಕ್ಷೆಯ ಪ್ರಭಾವ ಎಷ್ಟರಮಟ್ಟಿಗೆ ಭಯಾನಕವಾಗಿರುತ್ತದೆ ಎಂಬುದನ್ನು ಸವಿಸ್ತಾರವಾಗಿ ವಿವರಿಸಿದರು.
ಗೌರವ ಉಪಸ್ಥಿತರಾಗಿ ಸುಳ್ಯ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕಿ ನಳಿನಿ ಕೆ, ಮುಖ್ಯ ಅತಿಥಿಗಳಾಗಿ ಸುಳ್ಯ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಜನಾರ್ಧನ ಬಿ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್, ನಗರ ಪಂಚಾಯತ್ ಸದಸ್ಯರುಗಳಾದ ಶರೀಫ್ ಕಂಠಿ, ಪ್ರವಿತ, ಶಾಲಾ ಸಮಿತಿಯ ಕಾರ್ಯಧ್ಯಕ್ಷ ಪ್ರವೀಣ್ ನಾಯಕ್, ವಕೀಲರು ಗಳಾದ ಎಂ ಎಂ ಬೊಳ್ಳಪ್ಪ, ನಾರಾಯಣ ಜಟ್ಟಿಪಳ್ಳ, ಸುದ್ದಿ ಪತ್ರಿಕೆ ಜಾಹೀರಾತು ವಿಭಾಗದ ಮುಖ್ಯಸ್ಥ ರಮೇಶ್ ನೀರಬಿದಿರೆ ಮೊದಲಾದವರು ಉಪಸ್ಥಿತರಿದ್ದರು.
ಕೆಪಿಎಸ್ ಕಾಲೇಜು ಪ್ರಾಂಶುಪಾಲ ಅಬ್ದುಲ್ ಸಮದ್ ಸ್ವಾಗತಿಸಿ ಪ್ರೌಢಶಾಲಾ ಸಹಶಿಕ್ಷಕ ಚಿನ್ನಪ್ಪ ಗೌಡ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ರಾಜೇಶ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ವೃಂದದವರು,ವಿದ್ಯಾರ್ಥಿಗಳು ಸಹಕರಿಸಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಸದಸ್ಯರು, ಪೊಲೀಸ್ ಸಿಬ್ಬಂದಿಗಳು, ಸ್ಥಳೀಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.