ನ.6: ಪಂಜದಲ್ಲಿ ಯಕ್ಷಗಾನ ತಾಳಮದ್ದಳೆ-ಪದ್ಯಾಣ ಗಣಪತಿ ಭಟ್ ಸಂಸ್ಮರಣಾ ಕಾರ್ಯಕ್ರಮ

Advt_Headding_Middle

ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ ಇದರ ಆಶ್ರಯದಲ್ಲಿ ದೀಪಾವಳಿ ವಾರ್ಷಿಕ ಪರ್ವದ ವಿಶೇಷ ತಾಳಮದ್ದಳೆ ಮತ್ತು ಗಾನಗಂಧರ್ವ ಪದ್ಯಾಣ ಗಣಪತಿ ಭಟ್ ಸಂಸ್ಮರಣಾ ಕಾರ್ಯಕ್ರಮ ನ.6.ರಂದು ಪಂಜ ಅ.3.30ರಿಂದ ಶಾರದಾಂಬಾ ಭಜನಾ ಮಂದಿರದಲ್ಲಿ ಜರುಗಲಿದೆ. ‘ಶ್ರೀ ರಾಮ ದರ್ಶನ ‘ ಪ್ರಸಂಗದ ತಾಳಮದ್ದಳೆ ಜರುಗಲಿದ್ದು,ಹಿಮ್ಮೇಳದಲ್ಲಿ ಶ್ರೀಮತಿ ಕಾವ್ಯಶ್ರೀ ಅಜೇರು, ಪ್ರಶಾಂತ್ ರೈ ಪಂಜ,ಕು.ರಚನಾ ಚಿದ್ಗಲ್ಲು, ಚೆಂಡೆ-ಮದ್ದಳೆ ಚಂದ್ರಶೇಖರ ಗುರುವಾಯನಕೆರೆ , ಮುರಳಿಧರ ಕಲ್ಲೂರಾಯ, ಅರ್ಥಧಾರಿಗಳು ಸುಣ್ಣಂಬಳ ವಿಶ್ವೇಶ್ವರಭಟ್, ಜಬ್ಬರ್ ಸಮೋ, ಭಾಸ್ಕರ ರೈ ಕುಕ್ಕುವಳ್ಳಿ, ಪ್ರಸಾದ ಸವಣೂರು, ಸಂಸ್ಮರಣಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಕೂತ್ಕುಂಜ ವಹಿಸಲಿದ್ದಾರೆ.ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ ದೀಪ ಪ್ರಜ್ವಲನೆ ಗೊಳಿಸಲಿದ್ದಾರೆ. ಖ್ಯಾತ ಯಕ್ಷಗಾನ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್ ನುಡಿನಮನ ಸಲ್ಲಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬಳ್ಳಕ ಹರಿಪುರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಚಿಕ್ಮುಳಿ ಉಪಸ್ಥಿತರಿರುವರು. ಎಂದು ಟ್ರಸ್ಟ್ ನ ಅಧ್ಯಕ್ಷ ಬಾಲಕೃಷ್ಣ ಪುತ್ಯ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.