ನಿಂತಿಕಲ್ಲು: ಕೆ.ಎಸ್. ಗೌಡ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

Advt_Headding_Middle

 

ಕೆ.ಎಸ್ ಗೌಡ ವಿದ್ಯಾಸಂಸ್ಥೆ ವರ್ಷ ನಗರ ನಿಂತಿಕಲ್ಲು ಮತ್ತು ಲಯನ್ಸ್ ಕ್ಲಬ್ ಪಂಜ ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ನ. 1ರಂದು ಸಂಸ್ಥೆಯ ಆವರಣದಲ್ಲಿ ನಡೆಯಿತು. ಲಯನ್ಸ್ ಕ್ಲಬ್ ಪಂಜ ಇದರ ಅಧ್ಯಕ್ಷ ಸಂತೋಷ್ ಕುಮಾರ್ ಜಾಕೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾಗತಿಸಿದರು. ಸರಕಾರಿ ಪ್ರೌಢ ಶಾಲೆ ಎಣ್ಮೂರು ಇದರ ಶಿಕ್ಷಕರಾದ ಲಿಂಗಪ್ಪ ಬೆಳ್ಳಾರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕನ್ನಡ ಬಾವುಟವನ್ನು ಆರೋಹಣಗೈದು ರಾಜ್ಯೋತ್ಸವ ಆಚರಣೆಯ ಪ್ರಾಮುಖ್ಯತೆಯನ್ನು ತಿಳಿಸಿದರು. ಕಾರ್ಯಕ್ರಮದ ನಿರ್ದೇಶಕ ರಾದ ಕುಮಾರಸ್ವಾಮಿ ಕೆ.ಎಸ್ ಅತಿಥಿಗಳನ್ನು ಪರಿಚಯಿಸಿದರು. ಪದವಿ ಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ರೈ ಪಾದೆಕಲ್ಲು ಶುಭ ಹಾರೈಸಿದರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಾರಾಯಣ ಗೌಡ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು. ಶಿಕ್ಷಕ ಮೋಹನ್ ಕುಮಾರ್ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಲ. ಬಾಲಿಶ ಪಳಂಗಾಯ ಲಯನ್ಸ್ ಪ್ರಾರ್ಥನೆ ಮಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಗುರುಗಳಾದ ಉಮೇಶ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಧ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭ ವಾದ ಕಾರ್ಯಕ್ರಮ ಲ. ರಾಜೇಶ್ ರೈಯವರ ವಂದನಾರ್ಪಣೆಯೊಂದಿಗೆ ಮುಕ್ತಾಯವಾಯಿತು. ಉಪನ್ಯಾಸಕ ರಾದ ಉಜ್ವಲ್ ಕೆ.ಎಚ್ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಪ್ರೌಢಶಾಲಾ ಹಾಗು ಪದವಿ ಪೂರ್ವ ಕಾಲೇಜಿನ ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.