ಸುಳ್ಯ : ಸೀಫುಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಕಿಟ್ ವಿತರಣೆ

Advt_Headding_Middle

ಸುಳ್ಯದ ಸೀಫುಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಶಕ್ತರಿಗೆ ಕೊಡುತ್ತಿರುವ ಆಹಾರ ಕಿಟ್ ಮತ್ತು ಧನಸಹಾಯ ಕೊಡುವ ಕಾರ್ಯಕ್ರಮ ಸೀಫುಡ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ನಡೆಯಿತು. ಕಿಟ್‌ನ್ನು ಸುಳ್ಯ ಪೊಲೀಸ್ ಉಪನಿರೀಕ್ಷಕರಾದ ದಿಲೀಪ್‌ರವರು ವಿತರಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಅನಿತಾ ಲಕ್ಷ್ಮಿ, ಸುದ್ದಿ ಬಿಡುಗಡೆಯ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ಕರ್ನಾಟಕ ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯ ದಿನೇಶ್ ಹಾಲೆಮಜಲು, ಟ್ರಸ್ಟ್‌ನ ಅಧ್ಯಕ್ಷ ಹಾಜಿ ಇಬ್ರಾಹಿಂ, ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು. ಸುಮಾರು ೪೨ ಮಂದಿ ಅಶಕ್ತರಿಗೆ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಹೊಸದಾಗಿ ಆಗಮಿಸಿದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಹಾಗೂ ತಹಶೀಲ್ದಾರ್ ಅನಿತಾ ಲಕ್ಷ್ಮಿಯವರಯನ್ನು ಟ್ರಸ್ಟ್‌ನ ವತಿಯಿಂದ ಗೌರವಿಸಲಾಯಿತು. ಟ್ರಸ್ಟ್‌ನ ಕಾರ್ಯದರ್ಶಿ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.