ಅಜ್ಜಾವರ : ಗೋ ಪೂಜೆ

Advt_Headding_Middle

 

ಅಜ್ಜಾವರ ಗ್ರಾಮದ ಮಾವಿನಪಳ್ಳದ ಶ್ರೀ ಮಹಾಮಾಯಿ ದೇವಸ್ಥಾನದಲ್ಲಿ ವಿಶ್ವಹಿಂದೂ ಪರಿಷತ್ ಭಜರಂಗದಳ, ಶಿವಾಜಿ ಶಾಖೆ ಅಜ್ಜಾವರ ಸುಳ್ಯ ಮತ್ತು ಮಹಾಮಾಯಿ ದೇವಸ್ಥಾನದ ಆಶ್ರಯದಲ್ಲಿ ನ.5 ರಂದು ಗೋ ಪೂಜೆಯನ್ನು ನೆರವೇರಿಸಲಾಯಿತು. ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರೂ ತಾಲೂಕು ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರೂ ಚನಿಯ ಕಲ್ತಡ್ಕರವರು ಅತಿಥಿಗಳನ್ನು ಬರಮಾಡಿಕೊಂಡರು. ಚೈತನ್ಯ ಸೇವಾಶ್ರಮದ ಯೋಗೇಶ್ವರಾನಂದ ಸ್ವಾಮೀಜಿಯವರು ಗೋ ಪೂಜೆಯನ್ನು ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ರಾಜೇಶ್ ಶೆಟ್ಟಿ ಮೇನಾಲ ವಹಿಸಿದ್ದರು.
ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಚನಿಯ ಕಲ್ತಡ್ಕ ಮತ್ತು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಅನಿಲ್ ಬಿ.ವಿ. ಶುಭ‌ಹಾರೈಸಿದರು.
ವೇದಿಕೆಯಲ್ಲಿ ವಿ.ಹಿಂ. ಪ ಭಜರಂಗದಳ ಶಿವಾಜಿ ಶಾಖೆ ಇದರ ಅಧ್ಯಕ್ಷರಾದ ನಾರಾಯಣ ಬಂಟ್ರಬೈಲು, ದೇವಸ್ಥಾನದ ಆಡಳಿತ ಮೊಕ್ತೇಸರ ಕುಶಲ, ಪ್ರಧಾನ ಪಾತ್ರಿ ಆನಂದ, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಧನಲಕ್ಷ್ಮೀ ಮಹಿಳಾ ಮಂಡಲದ ಅಧ್ಯಕ್ಷೆ ಹಾಗೂ ಕಾರ್ಯಕ್ರಮ ಸಂಚಾಲಕರಾದ ಶಶ್ಮೀ ಭಟ್ ಉಪಸ್ಥಿತರಿದ್ದರು. ಸೀತಾರಾಮ ಶಾಂತಿಮಜಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗುರುರಾಜ್ ಅಜ್ಜಾವರ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.