ಬೆಳ್ಳಾರೆಯಲ್ಲಿ ಅಲ್ಪಸಂಖ್ಯಾತರ ದೊಡ್ಡಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ನೂತನ ಶಾಖೆ ಉದ್ಘಾಟನೆ

Advt_Headding_Middle

 

ಕಠಿಣ ಪರಿಶ್ರಮ ಮತ್ತು ಸೇವೆಯಿಂದ ಜನತೆಗೆ ಸಹಕರಿಸಿ : ಮಾಜಿ ಸಚಿವ ರಮಾನಾಥ ರೈ

ಸುಳ್ಯದಲ್ಲಿ ಕಳೆದ 24 ವರ್ಷಗಳಿಂದ ಪ್ರಧಾನ ಕಚೇರಿಯನ್ನು ಹೊಂದಿರುವ ಅಲ್ಪಸಂಖ್ಯಾತರ ದೊಡ್ಡಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಶಾಖೆ ಇಂದು ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ಇದರ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ “ಸುಳ್ಯ ತಾಲೂಕಿನ ಎರಡನೆಯ ದೊಡ್ಡ ನಗರವಾಗಿ ಬೆಳೆಯುತ್ತಿರುವ ಬೆಳ್ಳಾರೆಯಲ್ಲಿ ಈ ಒಂದು ಸಂಸ್ಥೆಯು ಉದ್ಘಾಟನೆ ಗೊಳ್ಳುತ್ತಿರುವುದು ಉತ್ತಮ ವಿಷಯವಾಗಿದೆ. ಕಠಿಣ ಪರಿಶ್ರಮ ಮತ್ತು ಸೇವೆಯನ್ನು ನೀಡಿ ಇಲ್ಲಿನ ಜನತೆಗೆ ಸಹಕರಿಸಿ” ಎಂದು ಹೇಳಿದರು.

“ಈ ಸಂಸ್ಥೆಯು ಬೆಳೆದು ಮುಂದಿನ ದಿನಗಳಲ್ಲಿ ಸುಳ್ಯದ ಎಲ್ಲಾವರ್ಗದ ಜನತೆಗೂ ಸಹಕಾರ ಸಿಗುವಂತಾಗಲಿ” ಎಂದು ಶುಭ ಹಾರೈಸಿದರು. ಈ ಸಂಸ್ಥೆಗಾಗಿ ಸೇವೆಸಲ್ಲಿಸಿದ ಮಾಜಿ ಅಧ್ಯಕ್ಷರುಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿದರು.

 

ನೂತನ ಶಾಖೆಯನ್ನು ಪಂಬೆತ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಾಕೆ ಮಾಧವ ಗೌಡ ಶಾಖೆಯನ್ನು ಉದ್ಘಾಟಿಸಿ, ಮಾತನಾಡಿ “ಸಹಕಾರಿ ಕ್ಷೇತ್ರ ಬೆಳೆಯಲು ಆಡಳಿತದಲ್ಲಿ ದಕ್ಷತೆ, ಪ್ರಾಮಾಣಿಕತೆ, ಸಂಸ್ಥೆಯ ಮೇಲಿರುವ ಪ್ರೀತಿ ಈ ಮೂರು ಅಂಶಗಳು ದಕ್ಷಿಣ ಕನ್ನಡ ಜಿಲ್ಲೆ ಸಹಕಾರಿ ಕ್ಷೇತ್ರ ಬೆಳೆಯಲು ಕಾರಣವಾಗಿ ಸಹಕಾರಿ ಸಂಸ್ಥೆಗಳು ಬಲು ದೊಡ್ಡ ಕೊಡುಗೆ ನೀಡಿದೆ” ಎಂದು ಅವರು ಹೇಳಿದರು.

 “ಸಹಕಾರಿ ಕ್ಷೇತ್ರವು ಪ್ರತಿ ಗ್ರಾಮದಲ್ಲಿ ಜನರ ಆರ್ಥಿಕ, ಸಾಮಾಜಿಕ ಮತ್ತು ಅಭ್ಯುದಯಕ್ಕೆ ಸಹಕಾರಿ ಸಂಘಗಳು ಕಾರಣವಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಸರಕಾರದ ಹಸ್ತಕ್ಷೇಪ ಕಡಿಮೆ ಮಾಡಬೇಕಾಗಿದೆ” ಎಂದು ಅವರು ಹೇಳಿದರು. “ಅಲ್ಪಸಂಖ್ಯಾತರ ದೊಡ್ಡಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘವು ರಾಜ್ಯ ಮಟ್ಟಕ್ಕೆ ಬೆಳೆಯಲಿ” ಎಂದು ಅವರು ಶುಭ ಹಾರೈಸಿದರು.

 

ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಪನ್ನೆ ಛಾಪಾ ಕಾಗದಕ್ಕೆ ಚಾಲನೆ ನೀಡಿ ಮಾತನಾಡಿ “ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ ಸಂಸ್ಥೆಯು ಎತ್ತರಕ್ಕೆ ಬೆಳೆಯಲಿ” ಎಂದು ಶುಭ ಹಾರೈಸಿದರು. ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಿಲ್ ರೈ ಬೆಳ್ಳಾರೆ ಕ್ಯಾಲೆಂಡರ್ ಬಿಡುಗಡೆ ಮಾಡಿ “ಮುಂದಿನ ದಿನಗಳಲ್ಲಿ ನಮ್ಮ ಸಹಕಾರಿ ಸಂಸ್ಥೆಯ ಸದಸ್ಯರೊಂದಿಗೆ ಚರ್ಚೆ ನಡೆಸಿ ನೂತನವಾಗಿ ಆರಂಭಗೊಂಡ ಈ ಸಂಸ್ಥೆಗೆ ಸಹಕಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಸಂಸ್ಥೆಗೆ ಶುಭಹಾರೈಸಿದರು .

ಅಲ್ಪಸಂಖ್ಯಾತರ ದೊಡ್ಡಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕ ಮಾತನಾಡಿ “ಕಳೆದ 24 ವರ್ಷಗಳಿಂದ ಸಂಸ್ಥೆಯ ನಡೆದು ಬಂದ ಹಾದಿ ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ತಮ್ಮ ಸಹಕಾರಿ ಸಂಘವನ್ನು ಬೆಳೆಸುವ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಘದ ಮಾಜಿ ಅಧ್ಯಕ್ಷರಾದ ಎಸ್.ಎಂ.ಬಾಪೂ ಸಾಹೇಬ್, ಟಿ.ಎಂ.ಶಹೀದ್ ಸಂಸ್ಥೆಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷರುಗಳಾದ ಟಿ.ಎಂ. ಶಹೀದ್, ಎಸ್.ಸಂಶುದ್ದೀನ್, ಜಿ.ಎಂ.ಮಹಮ್ಮದ್(ಆರ್.ಕೆ), ಇಸ್ಮಾಯಿಲ್ ಕೆ.ಎಂ.,ಮಾಜಿ ಕಾರ್ಯದರ್ಶಿ ಜಿ.ಎ.ಅಬೂಬಕ್ಕರ್ ಅವರನ್ನು ದ.ಕ. ಜಿಲ್ಲಾ ಮಾಜಿ ಸಚಿವ ಬಿ. ರಮಾನಾಥ ರೈ ಸಂಸ್ಥೆಯ ವತಿಯಿಂದ ಸನ್ಮಾನಿಸಿದರು. ಸಂಸ್ಥೆಯ ವತಿಯಿಂದ ಮಾಜಿ ಸಚಿವ ರಮಾನಾಥ ರೈ ರವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.
ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷೆ ಹಾಜಿರಾ ಗಫೂರ್ ಕಲ್ಮಡ್ಕ, ಹಿರಿಯ ಸಾಮಾಜಿಕ ಮುಂದಾಳು ಹಾಜಿ ಇಸಾಕ್ ಸಾಹೇಬ್ ಪಾಜಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ, ಸಂಪಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಸುಳ್ಯ ತಾಲೂಕು ಮಹಿಳಾ ವಿವಿಧೊದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ರಾಜೀವಿ ಆರ್. ರೈ, ಗ್ರಾ.ಪಂ.ಸದಸ್ಯ ಇಕ್ಬಾಲ್ ಬೆಳ್ಳಾರೆ ಮುಖ್ಯ ಅತಿಥಿಗಳ ನೆಲೆಯಲ್ಲಿ ಮಾತನಾಡಿ ಮಾತನಾಡಿ ಸಂಸ್ಥೆಗೆ ಶುಭಹಾರೈಸಿದರು.
ಉದ್ಯಮಿ ಅಬೂಬಕ್ಕರ್ ಮಂಗಳ, ಸಂಘದ ಉಪಾಧ್ಯಕ್ಷ ಮೊಹಿಯದ್ದೀನ್ ಫ್ಯಾನ್ಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್, ನಿರ್ದೇಶಕರಾದ ಎಸ್. ಶಂಸುದ್ದೀನ್ ಅರಂಬೂರು,ಕೆ.ಎಂ.ಇಸ್ಮಾಯಿಲ್ ಪಡ್ಪಿನಂಗಡಿ, ಆರ್. ಕೆ.ಮಹಮ್ಮದ್, ಶಾಫಿ ಕುತ್ತಮೊಟ್ಟೆ, ಎ.ಕೆ.ಹಸೈನಾರ್ ಕಲ್ಲುಗುಂಡಿ, ಜಾರ್ಜ್ ಡಿಸೋಜ, ಆಮಿನಾ ಜಯನಗರ, ಜೂಲಿಯಾನ ಕ್ರಾಸ್ತ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಪಾಜೆ ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಐದು ಲಕ್ಷ ರೂಪಾಯಿಗಳ ಚೆಕ್ಕನ್ನು ಅಲ್ಪಸಂಖ್ಯಾತರ ದೊಡ್ಡಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ ರವರಿಗೆ ಹಸ್ತಾಂತರಿಸಿದರು
ಇಕ್ಬಾಲ್ ಎಲಿಮಲೆ ಸ್ವಾಗತಿಸಿ, ಆರ್.ಕೆ.ಮಹಮ್ಮದ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ಸಹಕರಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸಂಸ್ಥೆಯ ವತಿಯಿಂದ ಪ್ರಥಮ ಠೇವಣಿ ದಾರರಿಗೆ ಹಾಗೂ ಮುಖ್ಯ ಅತಿಥಿಗಳಿಗೆ ಕಿರು ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.