ಜಾಲ್ಸೂರಿನಲ್ಲಿ 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ

Advt_Headding_Middle

 

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ 6 ವರ್ಷಗಳ ಹಿಂದೆ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಪುತ್ತೂರು 5ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಜಾಲ್ಸೂರು ಗ್ರಾಮದ ಸತೀಶ್ ಆಪಾದಿತ ವ್ಯಕ್ತಿ. 2015ರ ಡಿ. 20ರಂದು ಅಪಾದಿತ ಸತೀಶ್ ಅವರು ಮಧ್ಯಾಹ್ನ ಮನೆಯಂಗಳದಲ್ಲಿ ಆಟವಾಡುತ್ತಿದ್ದ 6 ವರ್ಷದ ಅಪ್ರಾಪ್ತೆಗೆ ಚಾಕೋಲೇಟ್ ಮತ್ತು ಐಸ್‌ಕ್ರೀಮ್ ಕೊಡುವ ಆಮಿಷವೊಡ್ಡಿ ಮನೆಯೊಳಗೆ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಕುರಿತು ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಸುಳ್ಯ ಪೊಲೀಸರು ಆರೋಪಿ ಸತೀಶ್ ಅವರ ವಿರುದ್ಧ ಭಾ.ದಂ.ಸಂ ಕಲಂ 376 ಮತ್ತು ಪೋಕ್ಸೋ ಕಾಯ್ದೆ ಕಲಂ 4, 6, 8, 10 ರಡಿ ಪ್ರಕರಣ ದಾಖಲಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್‌ಪಿರೇರಾ ಅವರು ಪ್ರಕರಣಕ್ಕೆ ಸಂಬಂಧಿಸಿ ೧೬ ಸಾಕ್ಷಿಗಳನ್ನು ವಿಚಾರಣೆ ಮಾಡಿದ್ದರು. ಬಳಿಕ ಆರೋಪಿ ಬಾಲಕಿ ಮೇಲೆ ಅತ್ಯಾಚಾರವೆಸಗಲು ಪ್ರಯತ್ನ ಪಟ್ಟಿರುವುದಾಗಿ ಅವರು ತೀರ್ಪು ನೀಡಿದ್ದಾರೆ.

 

ಅಭಿಯೋಜನಾ ಪರ ಮತ್ತು ಆರೋಪಿ ಪರ ವಾದ ಆಲಿಸಿದ ನ್ಯಾಯಾಧೀಶರು ಆರೋಪಿಗೆ ಭಾ.ದಂ.ಸಂ ಕಲಂ 376/511 ಮತ್ತು ಪೋಕ್ಸೋ ಕಾಯ್ದೆ ಕಲಂ 4, 6/18 ರಡಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 25ಸಾವಿರ ದಂಡವನ್ನು ವಿಧಿಸಿದೆ. ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷದ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ. ದಂಡದ ಮೊತ್ತದಲ್ಲಿ ರೂ. 20ಸಾವಿರವನ್ನು ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಲು ನ್ಯಾಯಾಲಯ ಆದೇಶಿಸಿದೆ. ದ.ಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ದಂ.ಪ.ಸಂ. ಕಲಂ 357(ಎ) ರಡಿ ರೂ. 1,00,000/- ವನ್ನು ನೊಂದ ಬಾಲಕಿಗೆ ಪಾವತಿಸಲು ಮಾನ್ಯ ನ್ಯಾಯಾಲಯವು ಆದೇಶಿಸಿದೆ.

ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ವೈದ್ಯೆ ಡಾ. ಶುಲ್ ಸುವರಿಸ್ ವಿಡಿಯೋ ಕಾನ್ನರೆನ್ಸ್ ಮೂಲಕ ಸಾಕ್ಷಿ ನುಡಿದಿರುತ್ತಾರೆ. ಪ್ರಕರಣದ ತನಿಖಾಧಿಕಾರಿಗಳಾದ ಚಂದ್ರಶೇಖರ ಹೆಚ್.ವಿ. ಮತ್ತು ಬಿ.ಎಸ್, ಸತೀಶ್ ವೃತ್ತ ನಿರೀಕ್ಷಕರು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗಿ ವಿವರವಾದ ಸಾಕ್ಷಿ ನುಡಿದಿರುತ್ತಾರೆ. ಸರ್ಕಾರದ ಪರವಾಗಿ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಕುದ್ರಿಯ ಪುಷ್ಪರಾಜ ಅಡ್ಯಂತಾಯರವರು ವಾದಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.