ಅರಂತೋಡು ಸಿರಿಸೌಧ ಸಭಾಭವನದಲ್ಲಿ ಕಾನೂನು ಅರಿವು ಕಾರ್ಯಕ್ರಮ

Advt_Headding_Middle

 

ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ತಾಲೂಕು ಆಡಳಿತ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಸುದ್ದಿ ಸಮೂಹ ಮಾಧ್ಯಮ, ಅರಂತೋಡು ತೊಡಿಕ್ಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ, ಗ್ರಾಮ ಪಂಚಾಯತ್ ಅರಂತೋಡು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ, ದುರ್ಗಾಮಾತಾ ಮಹಿಳಾ ಮಂಡಳಿ ಅರಂತೋಡು ಇದರ ಸಂಯುಕ್ತಾಶ್ರಯದಲ್ಲಿ ಮಹಿಳಾ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಎಂಬ ವಿಷಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಅರಂತೋಡು ತೊಡಿಕಾನ ಸಿರಿ ಸೌಧ ಸಭಾಭವನದಲ್ಲಿ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಷ್ಟ್ರದಾದ್ಯಂತ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮ ಗ್ರಾಮಗಳಿಗೆ ಮತ್ತು ಮನೆ ಮನೆಗಳಿಗೆ ಕಾನೂನು ಅರಿವು ಕಾರ್ಯಕ್ರಮ ನೀಡುವ ಕುರಿತು ಕಳೆದ 45 ದಿನಗಳಿಂದ ಸುಳ್ಯ ತಾಲೂಕು ಕಾನೂನು ಸೇವಾ ಸಮಿತಿ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಂಡು ಬಂದಿದ್ದೇವೆ. ಕಾರ್ಯಕ್ರಮದಲ್ಲಿ ಇಂದಿನ ವಿಷಯ ಮಹಿಳಾ ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಪ್ರಕಾರ ಯಾವುದೇ ರೀತಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವುದು, ನಿಂದಿಸುವುದು ಮಾಡಿದ್ದಲ್ಲಿ ಕಾನೂನಿನಲ್ಲಿ ಇರುವ ಶಿಕ್ಷೆಯ ಕುರಿತು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಹಿರಿಯ ನ್ಯಾಯವಾದಿ ನಳಿನ್ ಕುಮಾರ್ ಕೋಡ್ತುಗುಳಿ ಮಾತನಾಡಿ ಮಹಿಳಾ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಯಂ. ವೆಂಕಪ್ಪ ಗೌಡ ವಹಿಸಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ, ಅರಂತೋಡು ಪ್ರಾ. ಕೃ.ಪ. ಸ. ಸಂ. ನಿ. ಆರಂತೋಡು ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ವಿಶ್ರಾಂತ ಪ್ರಾಂಶುಪಾಲ ಕೆ.ಆರ್.ಗಂಗಾಧರ್, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಅರಂತೋಡು, ದುರ್ಗಾಮಾತಾ ಮಹಿಳಾ ಮಂಡಳಿ ಅಧ್ಯಕ್ಷೆ ಪುಷ್ಪಾ ಮೇದಪ್ಪ, ಸಂವಿಧಾನ ಮತ್ತು ಕಾನೂನು ಕಾಯ್ದೆಗಳ ಅರಿವಿನ ಪ್ರಯೋಜನದ ಬಗ್ಗೆ ಮಾತನಾಡಿ ಕಾರ್ಯಕ್ರಮದ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಪಂಚಾಯತ್ ವತಿಯಿಂದ ಹಿರಿಯ ನ್ಯಾಯಾಧೀಶ ಸೋಮಶೇಖರ್ ಅವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಎ.ಪಿ.ಪಿ. ಜನಾರ್ಧನ್, ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ, ಪಿ.ಡಿ.ಓ. ಜಯಪ್ರಕಾಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ಮೇಲ್ವಿಚಾರಕ ಸುಧೀರ್ ನೆಕ್ರಾಜೆ, ನ್ಯಾಯವಾದಿ ಹರಿಪ್ರಸಾದ್ ಸುಳ್ಯ ಮೊದಲಾದವರು ಉಪಸ್ಥಿತರಿದ್ದರು.

 ನ್ಯಾಯವಾದಿ ದೀಪಕ್ ಕುತ್ತಮೊಟ್ಟೆ ಸ್ವಾಗತಿಸಿ ಅರಂತೋಡು ಗ್ರಾಮ ಪಂಚಾಯತಿ ಪಿ.ಡಿ.ಓ. ವಂದಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ್ ನಾಯಕ್ ನಿರೂಪಿಸಿದರು. ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸುಳ್ಯ ವಕೀಲರ ಸಂಘದ ಸದಸ್ಯರು,ಸ್ಥಳೀಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.