ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ

Advt_Headding_Middle

 

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿಗೆ ಹೊಸದಾಗಿ ಪ್ರವೇಶ ಪಡೆದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ಸ್ವಾಗತ ಹಾಗೂ ಅಭಿವಿನ್ಯಾಸ ಕಾರ್ಯಕ್ರಮ ನ.12ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತೀಶ್ ಕುಮಾರ್ ಕೆ.ಆರ್.ರವರು ಮಕ್ಕಳನ್ನುದ್ದೇಶಿಸಿ ಮಾತನಾಡುತ್ತಾ “ಈ ಕಾಲೇಜಿನಲ್ಲಿ ಶಿಸ್ತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಅಶಿಸ್ತನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಮತ್ತು ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ” ಎಂದು ಪ್ರತಿಪಾದಿಸಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಹಿಂದಿ ವಿಭಾಗ ಮುಖ್ಯಸ್ಥ ರಾಮಕೃಷ್ಣ ಕೆ.ಎಸ್.ಮಾತನಾಡುತ್ತಾ “ನೂತನ ಶಿಕ್ಷಣ ನೀತಿ-2020 ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಟಿಯಿಂದ ಬಹಳ ಉತ್ತಮ ಪ್ರಯೋಗವಾಗಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಲಿದೆ” ಎಂದರು.

 ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಅಚ್ಚುತ ಪೂಜಾರಿ ಕೆ. ವಹಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳು ಬಾಲ್ಯದಿಂದಲೇ ಶಿಸ್ತು, ವಿಧೇಯತೆ, ವಿನಯತೆ, ಪ್ರಾಮಾಣಿಕತೆ ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಸಮಯ ಪಾಲನೆಯನ್ನು ಮೈ ಗೂಡಿಸಿಕೊಳ್ಳುವುದು ಬಹಳ ಅವಶ್ಯ .ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ನಿರ್ದಿಷ್ಟ ಸ್ಪಷ್ಟವಾದ ಗುರಿಯಿರಬೇಕು ಹಾಗೂ ಅದನ್ನು ಹಿರಿಯರ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಸಾಕಾರಗೊಳಿಸಿಕೊಳ್ಳಬೇಕು” ಎಂದರು.


ಕಾಲೇಜಿನ ಸಾಂಸ್ಕೃತಿಕ ಸಂಘದ ಸಂಚಾಲಕರಾದ ಪುಷ್ಪರಾಜ ಕೆ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸುರೇಖಾ ಹೆಚ್.ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಾಶಿ ಎಂ.ಆರ್. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎಲ್ಲ ಬೋಧಕರು ಹಾಗೂ 200ಕ್ಕಿಂತಲೂ ಹೆಚ್ಚು ಪ್ರಥಮ ಪದವಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.