ಕೆ.ವಿ.ಜಿ: ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಹಳೆವಿದ್ಯಾರ್ಥಿಗಳ ಆನ್‌ಲೈನ್ ಸಮಾವೇಶ

Advt_Headding_Middle

 

ಸುಳ್ಯ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ವತಿಯಿಂದ ಹಳೆವಿದ್ಯಾರ್ಥಿಗಳ ಆನ್‌ಲೈನ್ ಸಮಾವೇಶವು ನ.13 ರಂದು ನಡೆಯಿತು. ಈ ಸಮಾವೇಶದಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್, ಇನ್‌ಫಾರ್‌ಮೇಶನ್ ಸೈನ್ಸ್ ಹಾಗೂ ಎಂ.ಸಿ.ಎ. ವಿಭಾಗದ ದೇಶವಿದೇಶಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಮತ್ತು ಯಶಸ್ವಿಯಾಗಿ ಸ್ವಂತ ಉದ್ಯಮ ನಡೆಸುತ್ತಿರುವ 30ಕ್ಕೂ ಅಧಿಕ ಹಳೆವಿದ್ಯಾರ್ಥಿಗಳು ಭಾಗವಹಿಸಿದ್ದರು.

ಯು.ಎಸ್.ಎ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ವಾಸವಿರುವ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ವಿಚಾರ ವಿನಿಮಯದಲ್ಲಿ ಕಾಲೇಜಿನಲ್ಲಿ ಪ್ರಸಕ್ತ ನಡೆಯುತ್ತಿರುವ ಶೈಕ್ಷಣಿಕ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಹಳೆ ವಿದ್ಯಾರ್ಥಿಗಳು ವಿಭಾಗದ ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಯೋಜನೆಗಳ ಮಾಹಿತಿ ನೀಡಿ ಅದಕ್ಕೆ ಪೂರಕವಾದ ಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿದರು. ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ ಅವರು ವಿಭಾಗದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎ. ಜ್ಞಾನೇಶ್, ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಮತ್ತು ವಿ.ಟಿ.ಯುನ ಮಂಗಳೂರು ಪ್ರಾದೇಶಿಕ ಕಛೇರಿಯ ವಿಶೇಷಾಧಿಕಾರಿ ಡಾ. ಹೆಚ್.ಆರ್. ಶಿವಕುಮಾರ್‌ರವರು ಉಪಸ್ಥಿತರಿದ್ದು, ಕಾಲೇಜಿನ ಭವಿಷ್ಯದ ಯೋಜನೆಗಳಿಗೆ ಪೂರಕವಾಗುವಂತೆ ಹಳೆವಿದ್ಯಾರ್ಥಿಗಳು ಯಾವ ರೀತಿಯಲ್ಲಿ ಕೈಜೋಡಿಸಬಹುದೆಂದು ವಿವರಿಸಿ ಸೂಕ್ತ ಸಲಹೆಗಳನ್ನು ನೀಡಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಡಾ. ಪ್ರಜ್ಞಾ ಎಂ.ಆರ್. ಸ್ವಾಗತಿಸಿ, ಡಾ. ಸ್ಮಿತಾ ಎಂ.ಎಲ್ ವಂದಿಸಿದರು. ಡಾ. ಸವಿತಾ ಸಿ.ಕೆ. ಮತ್ತು ಪ್ರೊ. ಬಾಲಪ್ರದೀಪ್ ಕೆ.ಎನ್. ಕಾರ್ಯಕ್ರಮವನ್ನು ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.