ಎಡಮಂಗಲದಲ್ಲಿ ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡಬಂದು ಅಪಘಾತ

Advt_Headding_Middle

 

ಗಾಯಗೊಂಡಿದ್ದ ಸಹ ಸವಾರ ಆಸ್ಪತ್ರೆಯಲ್ಲಿ ಸಾವು

ಎಡಮಂಗಲದಲ್ಲಿ ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಪರಿಣಾಮ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಸಹಸವಾರನಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವರದಿಯಾಗಿದೆ.

ಕಡಬ ತಾಲೂಕು ಎಡಮಂಗಲ ಗ್ರಾಮದ ಎಡಮಂಗಲ-ಚಾರ್ವಕ ರಸ್ತೆಯಲ್ಲಿ ಎಡಮಂಗಲ ಪೇಟೆಯಿಂದ ಕೊಳಂಬೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುವ ಕೇರಳ ಮೂಲದ ಸಂತೋಷ್ ಎಂಬವರು ಅವರ ಅಣ್ಣ ಸುರೇಶ್ ಎಂಬವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿದ್ದ ಹೀರೋ ಮೆಸ್ಟ್ರೋ ಸ್ಕೂಟರ್ ರಸ್ತೆಯಲ್ಲಿ ನಾಯಿಯೊಂದು ಅಡ್ಡ ಬಂದ ಪರಿಣಾಮ ಸ್ಕೂಟರ್ ಸವಾರ ಸಂತೋಷ ಎಂಬವರ ಹತೋಟಿ ತಪ್ಪಿ ರಸ್ತೆಗೆ ಮಗುಚಿ ಬಿತ್ತು.
ಪರಿಣಾಮ ಸ್ಕೂಟರ್ ನಲ್ಲಿ ಸಹ ಸವಾರ ಸುರೇಶ ( 53) ಎಂಬವರ ತಲೆಗೆ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.