ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಶೈಕ್ಷಣಿಕ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ

Advt_Headding_Middle

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ೨೦೨೧-೨೨ನೇ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಪೂರ್ವಭಾವೀ ಚಟುವಟಿಕೆಗಳಿಗೆ ನ.೧೭ ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೆ.ವಿ.ಜಿ.ಸಿ.ಇ.ಯ ಹೆಮ್ಮೆಯ ಹಳೆ ವಿದ್ಯಾರ್ಥಿ ಡಾ. ಹರಿಕೃಷ್ಣ ರೈ, ಸೀನಿಯರ್ ಟೆಕ್ನಿಕಲ್ ಪ್ರೊಡಕ್ಟ್ ಮ್ಯಾನೇಜರ್, ಜಿಇ ಹೆಲ್ತ್‌ಕೇರ್, ಬೆಂಗಳೂರು ಇವರು ಮುಖ್ಯ ಅತಿಥಿಗಳಾಗಿದ್ದರು. ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಕಠಿಣ ಪರಿಶ್ರಮ, ಶಿಸ್ತು, ಶ್ರದ್ಧೆ ಇವೇ ಮುಂತಾದವುಗಳನ್ನು ಒಳಗೊಂಡ ಅಧ್ಯಯನವು ವಿದ್ಯಾರ್ಥಿಗಳಿಗೆ ಯಶಸ್ಸನ್ನು ತಂದು ಕೊಡುತ್ತವೆ ಎಂದು ಕಿವಿ ಮಾತು ಹೇಳಿದರು. ಹಾಗೂ ವಿದ್ಯಾರ್ಥಿ ಜೀವನದಿಂದಲೇ ಸಾಮಾಜಿಕ ಕಳಕಳಿಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು.
ಎ.ಒ.ಎಲ್.ಇ. ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎ.ಒ.ಎಲ್.ಇ. ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್ ಅವರು ಡಾ. ಹರಿಕೃಷ್ಣ ರೈ ಅವರನ್ನು ಸನ್ಮಾನಿಸಿದರು. ವಿದ್ಯಾರ್ಥಿ ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎ. ಜ್ಞಾನೇಶ್ ವಿಭಾಗದ ಮುಖ್ಯಸ್ಥರುಗಳನ್ನು ಪರಿಚಯಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಎ., ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಸುರೇಖ ಎಂ., ಟ್ರೈನಿಂಗ್ & ಪ್ಲೇಸ್‌ಮೆಂಟ್ ಆಫಿಸರ್ ಪ್ರೊ. ಅನಿಲ್ ಬಿ.ವಿ., ಇಆಅ ಸಂಯೋಜಕ ಪ್ರೊ. ವಿಜಯ ಕುಮಾರ್ ಕಾಣಿಚ್ಚಾರ್, ಮಾಧವ ಬಿ.ಟಿ., ಪ್ರಸನ್ನ ಕಲ್ಲಾಜೆ, ನಾಗೇಶ್ ಕೊಚ್ಚಿ ಸಭೆಯಲ್ಲಿ ಉಪಸ್ಥಿತರಿದ್ದರು. ಪಿ.ಯು.ಸಿ. ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಪ್ರವೀಣ ಎಸ್.ಡಿ. ಸ್ವಾಗತಿಸಿದರು ಮತ್ತು ಆ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಡಾ. ಜ್ಯೋತಿ ಆರ್ ಪ್ರಸಾದ್ ಅಭಿನಂದಿಸಿದರು. ಉಪಪ್ರಾಂಶುಪಾಲರು ಹಾಗೂ ಡೀನ್ ಅಕಾಡೆಮಿಕ್ ಡಾ. ಶ್ರೀಧರ್ ಕೆ.ಯವರು ಸ್ವಾಗತಿಸಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸುರೇಶ ವಿ. ಅತಿಥಿಗಳನ್ನು ಪರಿಚಯಿಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಮಾಶಂಕರ್ ಕೆ.ಎಸ್. ವಂದನಾರ್ಪಣೆಗೈದರು. ಪ್ರಾಧ್ಯಾಪಕರುಗಳಾದ ಶ್ರುತಿ ಪಿ.ಜೆ ಮತ್ತು ಅರುಣ ಪಿ.ಜಿ ಇವರು ಕಾರ್ಯಕ್ರಮ ನಿರೂಪಿಸಿದರು. ೭ನೇ ಸೆಮಿಸ್ಟರ್ ವಿದ್ಯಾರ್ಥಿನಿ ಕು. ಪ್ರಜ್ಞಾ ಪ್ರಾರ್ಥನೆಗೈದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.