ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಮತ್ತು ಮಧುಮೇಹ ಮಾಹಿತಿ

Advt_Headding_Middle

ಜಾಲ್ಸೂರು ಗ್ರಾಮದ ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಮತ್ತು ಮಧುಮೇಹ ಕುರಿತು ಮಾಹಿತಿ ಹಾಗೂ ಶುಗರ್ ಟೆಸ್ಟ್ ಕಾರ್ಯಕ್ರಮವು ನ.15ರಂದು ನಡೆಯಿತು.
ಅಂಗನವಾಡಿ ಕೇಂದ್ರದಲ್ಲಿ ಕೇಕ್ ಕತ್ತರಿಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಜಲಜಾಕ್ಷಿ ಅಡ್ಕಾರು ಅವರು ಮಧುಮೇಹದ ಕುರಿತು ಮಾಹಿತಿ ನೀಡಿದರು. ಅಂಗನವಾಡಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ನಳಿನಿ ಎ.ಎಸ್. ಆಶಾ ಕಾರ್ಯಕರ್ತೆ ಶ್ರೀಮತಿ ಕುಸುಮಾವತಿ, ಹಿರಿಯರಾದ ಶ್ರೀಮತಿ ದೇವಕಿ, ಶ್ರೀಮತಿ ಕಮಲಾಕ್ಷಿ, ಮಕ್ಕಳ ಪೋಷಕರಾದ ಶಿವಪ್ರಸಾದ್ ತಂಟೆಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಛದ್ಮವೇಷ, ಚಿತ್ರಕ್ಕೆ ಬಣ್ಣಹಚ್ಚುವ ಸ್ಪರ್ಧೆಗಳನ್ನು ನಡೆಸಿ, ಬಹುಮಾನ ವಿತರಿಸಲಾಯಿತು.ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಿವೇದಿತಾ ಕೋನಡ್ಕಪದವು ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಅಂಗನವಾಡಿ ಸಹಾಯಕಿ ಶ್ರೀಮತಿ ಶಾರದಾ ಸಹಕರಿಸಿದರು. ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರುಗಳು, ಮಕ್ಕಳ ಪೋಷಕರು, ತಾಯಂದಿರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.