ಸುಬ್ರಹ್ಮಣ್ಯ: ವಿಶ್ವ ಮಧುಮೇಹ ದಿನಾಚರಣೆ

Advt_Headding_Middle

 

ಉಚಿತ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಪರೀಕ್ಷೆ ಶಿಬಿರ

 

ಕೆ ಎಸ್ ಎಸ್ ಮಹಾವಿದ್ಯಾಲಯ ಸುಬ್ರಹ್ಮಣ್ಯ ದಲ್ಲಿ, ಐಕ್ಯೂಎಸಿ, ರಾಷ್ಟ್ರೀಯ ಸೇವಾ ಯೋಜನೆ , ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಮಣ್ಯ, ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇವುಗಳ ಸಹಯೋಗದೊಂದಿಗೆ ನ.18 ರಂದು ವಿಶ್ವ ಮಧುಮೇಹ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಲತಾ ಕಮಿಲ, ಇವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗಳಾದ ಡಾ. ತ್ರಿಮೂರ್ತಿ ಇವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸುಬ್ರಹ್ಮಣ್ಯದ ರೋಟರಿ ಅಧ್ಯಕ್ಷರಾದ ವಿಜಯಕುಮಾರ್, ರೋಟರಿ ಲೆಫ್ಟಿನೆಂಟ್ ಜನರಲ್, ಭರತ್ ನೆಕ್ರಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಯು. ಡಿ ಶೇಖರ್, ಸೀನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಆಫೀಸರ್ ಬಸವರಾಜ್ , ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್ ಎಸ್, ಎಸ್ ಎಸ್ ಪಿಯು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸೋಮಶೇಖರ್ ನಾಯಕ್, ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಮಹಾವಿದ್ಯಾಲಯ ಹಾಗೂ ಎಸ್ ಎಸ್ ಪಿಯು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕರಾದ ಡಾ. ಪ್ರಸಾದ್ ಎನ್ ಧನ್ಯವಾದ ಸಮರ್ಪಿಸಿದರು. ಮಹಾವಿದ್ಯಾಲಯದ ಎನ್ಎಸ್ಎಸ್ ಸಂಯೋಜಕರಾದ ಆರತಿ ಕೆ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಆರಂಭದಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದ್ದು ಕಾಶಿಕಟ್ಟೆಯಿಂದ ಹೊರಟು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವರೆಗೆ ಜಾಥಾ ತೆರಳಿ ಪೇಟೆಯಲ್ಲಿ ಸಂಚರಿಸಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.