ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದ ಡಾ.ಎಂ.ಎನ್.ರಾಜೇಂದ್ರಕುಮಾರ್

Advt_Headding_Middle

 

ದ.ಕ., ಉಡುಪಿ ಮತಕ್ಷೇತ್ರದಿಂದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರ ಮಾಡಿ ಉಭಯ ಜಿಲ್ಲೆಗಳ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ ಕುಮಾರ್‌ರವರು ಇದೀಗ ಸ್ಪರ್ಧಾ ನಿರ್ಧಾರದಿಂದ ಹಿಂದೆ ಸರಿಯಲು ನಿರ್ಧರಿಸಿ ಅಚ್ಚರಿ ಮೂಡಿಸಿದ್ದಾರೆ.


ಉಭಯ ಜಿಲ್ಲೆಗಳ ಸಹಕಾರಿ ಧುರೀಣರುಗಳು ಚುನಾವಣೆಗೆ ಸ್ಪಧಿಸುವಂತೆ ಒತ್ತಾಯ ಮಾಡಿದ ಹಿನ್ನಲೆಯಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸ್ಪರ್ಧೆಯ ನಿರ್ಧಾರ ಮಾಡಿದ್ದರು. ನ.16ರಂದು ಅವರ ಚುನಾವಣಾ ಕಚೇರಿ ಮಂಗಳೂರಿನಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಂಡಿತ್ತು. ಆದರೆ ಇದೀಗ ಅವರು ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ತಾನು ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿರುವುದಾಗಿ ವರದಿಯಾಗಿದೆ. ಈ ನಿರ್ಧಾರದ ಹಿಂದಿರುವ ಕಾರಣಗಳೇನೆಂದು ತಿಳಿದು ಬಂದಿಲ್ಲ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.