ಕಾಯರ್ತೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Advt_Headding_Middle

ಕಾಯರ್ತೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯ ನವಂಬರ್ 24 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಗನವಾಡಿ ಪುಟಾಣಿ ಬೇಬಿ ಆರಾಧ್ಯ ವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ ಕೆ.ಎಂ. ಉದ್ಘಾಟಿಸಿ, ಮಕ್ಕಳ ದಿನಾಚರಣೆ ಮತ್ತು ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಪೂಜಾ ಸಂತೋಷ್ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಕೋರಿದರು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶಾರದ ಜಯರಾಮ, ಶ್ರೀ ರಕ್ತೇಶ್ವರಿ ಸೇವಾ ಸಮಿತಿ ಅಧ್ಯಕ್ಷ ಶಶಿಧರ್ ಶೆಟ್ಟಿ ಪಡ್ಪು, ಮಹಿಳಾ ಮಂಡಲದ ಅಧ್ಯಕ್ಷರಾದ ಹೇಮಾವತಿ ವೇಣುಗೋಪಾಲ್, ಸ್ತ್ರೀಶಕ್ತಿ ಅಧ್ಯಕ್ಷರಾದ ಚಂದ್ರಾವತಿ ಆರ್. ಉಪಸ್ಥಿತರಿದ್ದರು. ಇನ್ನರ್ವೀಲ್ ಕ್ಲಬ್ ನವರು ಬಹುಮಾನದ ಪ್ರಾಯೋಜಕತ್ವ ವಹಿಸಿದರು. ಪುಟಾಣಿಗಳಿಗೆ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀನಿಧಿ ಮಹಿಳಾ ಮಂಡಲ ಸದಸ್ಯರು ಸ್ತ್ರೀಶಕ್ತಿ ಸದಸ್ಯರು ಪೋಷಕರು, ತಾಯಂದಿರು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಸಹಾಯಕಿ ಲೀಲಾವತಿ ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಲತಾ ಕಾರ್ಯಕ್ರಮ ನಿರೂಪಿಸಿದರು. ಜಯಕೃಷ್ಣ ಸ್ವಾಗತಿಸಿ, ನಯನ ಪ್ರವೀಣ್ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.