ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ 

Advt_Headding_Middle

 

 

ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಸುಳ್ಯ ತಾಲೂಕು ಕಾನೂನು ಸೇವಾ ಸಮಿತಿ,ನೆಹರು ಸ್ಮಾರಕ ಮಹಾವಿದ್ಯಾಲಯ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಇಂದು ಸುಳ್ಯ ತಾಲೂಕು ಆಸ್ಪತ್ರೆ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲ್ಲೂಕು ಕಾನೂನು ಪ್ರಾಧಿಕಾರ ಸಮಿತಿ ಅಧ್ಯಕ್ಷ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ ಎ. ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.


ಸಮುದಾಯದಲ್ಲಿ ಏಡ್ಸ್ ಎಂಬ ವಿಷಯದ ಕುರಿತು ಕೆವಿಜಿ ಮೆಡಿಕಲ್ ಕಾಲೇಜು ಸಮುದಾಯ ವೈದ್ಯಕೀಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಅಪೂರ್ವ ದೊರೆ, ಸ್ತ್ರೀರೋಗ ತಜ್ಞ ಡಾ. ವೀಣಾ ಗರ್ಭಿಣಿ ಸ್ತ್ರೀಯರಲ್ಲಿ ಏಡ್ಸ್ ಬಗ್ಗೆ ಮಾಹಿತಿ, ಮಕ್ಕಳ ತಜ್ಞೆ ಡಾ. ರಜಿನಿ ಎ ಜೆ ಮಕ್ಕಳು ಮತ್ತು ಏಡ್ಸ್ ವಿಷಯಗಳ ಬಗ್ಗೆ ಅರಿವು, ಹಾಗೂ ಜಾಗೃತಿ ನೀಡುವ ಮಾಹಿತಿ ಕಾರ್ಯಗಾರವನ್ನು ನೀಡಿದರು.
ವೇದಿಕೆಯಲ್ಲಿ ಡಾ. ಅನುರಾಧ ಕುರುಂಜಿ, ಡಾ. ಕರುಣಾಕರ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ಎನ್ ಸಿಸಿ ಕೆಡೆಟ್ ಗಳು, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಭಾಗವಹಿಸಿದ್ದರು.
ಬಾಲಕೃಷ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಮುರಳಿ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.