ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಪೂರ್ವ ಪ್ರಾಥಮಿಕ ಶಾಲಾ ಉದ್ಘಾಟನಾ ಕಾರ್ಯಕ್ರಮ

Advt_Headding_Middle
Advt_Headding_Middle

ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ನ. ೨೫ರಂದು ಪೂರ್ವ ಪ್ರಾಥಮಿಕ ಶಾಲಾ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಸಂಸ್ಥೆಯ ಅಧ್ಯಕ್ಷ ರುಕ್ಮಯ್ಯದಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹಾಕಲು ಶಾಲೆ ಮಹತ್ತರವಾದ ಪಾತ್ರ ವಹಿಸುತ್ತದೆ ಎಂದು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬುಸಾಲಿ ನುಡಿದರು.
ಶಾಲೆಯೊಳಗೆ ಸೇರಿದ ನಂತರ ಎಲ್ಲ ವಿದ್ಯಾರ್ಥಿಗಳು ಸಮಾನರು, ಒಬ್ಬ ವಿದ್ಯಾರ್ಥಿಯನ್ನು ಇನ್ನೊಬ್ಬ ವಿದ್ಯಾರ್ಥಿಯ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಬ್ಯಾಂಕ್ ಆಫ಼್ ಬರೋಡಾದ ಸಂಚಾಲಕರು ತಮ್ಮ ಮುಖ್ಯ ಅತಿಥಿ ಭಾಷಣದಲ್ಲಿ ತಿಳಿಯಪಡಿಸಿದರು.
ಎಲ್ಲಾ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಶುಭ ಕೋರಿ, ಪೋಷಕರಿಗೆ ಶಾಲೆಯ ನೀತಿ ನಿಯಮಗಳನ್ನು ಶಾಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ತಿಳಿಯಪಡಿಸಿದರು.
ಮನೆಯೇ ಮೊದಲ ಪಾಠ ಶಾಲೆ ಜನನಿ ತಾನೆ ಮೊದಲ ಗುರು ಎಂಬಂತೆ ವಿದ್ಯಾರ್ಥಿಗಳು ಇಲ್ಲಿಯವರೆಗೆ ಮನೆಯಲ್ಲೇ ಇದ್ದು ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಇನ್ನು ಮುಂದೆ ಶಾಲೆಯಲ್ಲಿ ಪಠ್ಯ ಪಠ್ಯೇತರ ಎರಡು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಲೆಂದು ವಿದ್ಯಾರ್ಥಿ ವಿದ್ಯಾರ್ಥಿನಿಯರೆಲ್ಲರಿಗೂ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಪ್ರಧಾನ ಕಾರ್ಯದರ್ಶಿ, ಶಾಲಾ ಅಧ್ಯಕ್ಷರಾದ ರುಕ್ಮಯ್ಯದಾಸ್, ಶ್ರೀಮತಿ ಲೀಲಾವತಿ ರುಕ್ಮಯ್ಯದಾಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ , ಸದಸ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಶೋಭಾ ಕಿಶೋರ್ ಸ್ವಾಗತಿಸಿದರು, ಶಾಲಾ ಶಿಕ್ಷಕ ಧನರಾಜ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಉಪ ಪ್ರಾಂಶುಪಾಲರಾದ ಶ್ರೀಮತಿ ಪುನೀತಾ ಕೆ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.