ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೂವಿನ ತೇರಿನ ಉತ್ಸವ

Advt_Headding_Middle

 

 

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ವಾರ್ಷಿಕ ಜಾತ್ರೆ ಚಂಪಾಷಷ್ಠಿಯ ಪ್ರಯುಕ್ತ ಚೌತಿಯ ದಿನ ಹೂ ತೇರಿನ ಉತ್ಸವವು ಡಿ.7 ರ ರಾತ್ರಿ ನಡೆಯಿತು.

ಮಹಾಪೂಜೆಯ ನಂತರ ಶ್ರೀ ದೇವಳದ ಹೊರಾಂಗಣದಲ್ಲಿ ಬಂಡಿ ಉತ್ಸವ, ಪಾಲಕಿ ಉತ್ಸವ ಹಾಗೂ ಸಂಗೀತ, ಮಂಗಳವಾದ್ಯ, ನಾದಸ್ವರ, ಬ್ಯಾಂಡ್ ಸುತ್ತುಗಳ ಬಳಿಕ ರಥಬೀದಿಗೆ ಶ್ರೀ ದೇವರ ಪ್ರವೇಶವಾಯಿತು.ಬಳಿಕ ಉತ್ತರಾಧಿ ಮಠದಲ್ಲಿ ಮಯೂರ ವಾಹನ ಸುಬ್ರಹ್ಮಣ್ಯ ದೇವರಿಗೆ ಪೂಜೆ ನೆರವೇರಿತು.

ಹೂವಿನ ತೇರಿನಲ್ಲಿ ಸುಬ್ರಹ್ಮಣ್ಯ ದೇವರು ಸಹೋದರ ಕಾಶಿಕಟ್ಟೆ ಮಹಾಗಣಪತಿಯ ಸನ್ನಿಧಿಗೆ ಆಗಮಿಸಿ, ಮಹಾಗಣಪತಿ ಸನ್ನಿಧಾನದಲ್ಲಿ ವಿಶೇಷ ಹೂ ಮತ್ತು ಹಣತೆಗಳ ಶೃಂಗಾರದ ನಡುವೆ ಮಹಾಗಣಪತಿಗೆ ರಂಗಪೂಜೆ ನೆರವೇರಿತು. ಬಳಿಕ ವಾಸುಕಿ ಛತ್ರದ ಕಟ್ಟೆಯಲ್ಲಿ ಕಟ್ಟೆಪೂಜೆ, ಶಿವರಾತ್ರಿ ಕಟ್ಟೆಯಲ್ಲಿ ಮತ್ತು ಸವಾರಿ ಮಂಟಪದ ಸವಾರಿಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿತು.
ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಪಿಜಿಎಸ್‌ಎನ್ ಪ್ರಸಾದ್, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಶೋಭಾ ಗಿರಿಧರ್, ಲೋಕೇಶ್ ಮುಂಡುಕಜೆ, ಎಇಒ ಪುಷ್ಪಲತಾ ರಾವ್ ಸೇರಿದಂತೆ ದೇವಳದ ಸಿಬ್ಬಂಧಿಗಳು, ಭಕ್ತರು ಉಪಸ್ಥಿತರಿದ್ದರು.

ಪೋಟೋ: ಶಾಂತಲ ಸ್ಟುಡಿಯೋ ಸುಬ್ರಹ್ಮಣ್ಯ , ಪ್ರತಿರೂಪ ಸ್ಟುಡಿಯೋ ಸುಬ್ರಹ್ಮಣ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.