ಪಾಲೆಪ್ಪಾಡಿ ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ

Advt_Headding_Middle
Advt_Headding_Middle

 

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ರಸ್ತೆ ಕಾಂಕ್ರೀಟೀಕರಣಕ್ಕೆ ಸಚಿವರ ವಿಶೇಷ ಅನುದಾನದಿಂದ ರೂ.30 ಲಕ್ಷ ಅನುದಾನ ಮಂಜೂರಾಗಿದ್ದು ಗುದ್ದಲಿ ಪೂಜೆಯು ಜ.1 ರಂದು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಉತ್ತಮ ಗುಣಮಟ್ಟದಲ್ಲಿ ಆದಷ್ಟು ಬೇಗ ರಸ್ತೆ ಕಾಂಕ್ರೀಟೀಕರಣವಾಗಿ ಎಲ್ಲಾ ಜನರಿಗೆ ಉಪಯೋಗವಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಉಪಾಧ್ಯಕ್ಷ ವಿಕ್ರಂ ಪೈ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಶಕ್ತಿ ಕೇಂದ್ರದ ಅಧ್ಯಕ್ಷ ಜಯರಾಜ್ ಕುಕ್ಕೇಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಎ.ಪಿ.ಎಂ.ಸಿ.ಉಪಾಧ್ಯಕ್ಷ ನವೀನ್ ಕುಮಾರ್ ಸಾರಕರೆ, ಗ್ರಾಮ ಪಂಚಾಯತ್ ಸದಸ್ಯರಾದ ಯೋಗೀಶ ಕಲ್ಲಗದ್ದೆ, ಮಮತ ಉದ್ದಂಪಾಡಿ, ಸುಂದರಲಿಂಗಂ, ಸಹಕಾರಿ ಸಂಘದ ನಿರ್ದೇಶಕರಾದ ಕುಸುಮಾಧರ ಮಡ್ತಿಲ, ಪುರಂದರ ಶಾಂತಿಮೂಲೆ, ವಾಸುದೇವ ನಿಡುಬೆ, ಮಹೇಶ ಜಬಳೆ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್, ಡಾ.ಬಾಲಸುಬ್ರಹ್ಮಣ್ಯ ಭಟ್, ಜಯಪ್ರಸಾದ್ ಕಜೆತ್ತಡ್ಕ, ರಾಜೀವಿ ಲಾವಂತಡ್ಕ, ಹೇಮಂತ್ ಮಠ, ಧರ್ಮಪಾಲ ಲಾವಂತಡ್ಕ, ನಾಗಪ್ಪ ಪಾಲೆಪ್ಪಾಡಿ, ಶಿವರಾಮ ನೆಕ್ರೆಪ್ಪಾಡಿ, ಪ್ರದೀಪ್ ಪಾಲೆಪ್ಪಾಡಿ,ಶೇಖರ ಮಡ್ತಿಲ,ಶಿವಪ್ರಸಾದ್ ಕಟ್ಟತ್ತಾರು,ಕುಮಾರ ಕಟ್ಟತ್ತಾರು ಹಾಗೂ ಇತರ ಫಲಾನುಭವಿಗಳು ಉಪಸ್ಥಿತರಿದ್ದರು. ಶಾಂತರಾಮ ಕಣಿಲೆಗುಂಡಿ ಸ್ವಾಗತಿಸಿ, ವಂದಿಸಿದರು.

ಪ್ರತಿಭಟನೆ ಹಿಂತೆಗೆತ

ರಸ್ತೆ ಹೋರಾಟ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಜ.3 ರಂದು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆಗೆ ಸಿದ್ಧತೆ ನಡೆಸಿತ್ತು.
ಇಂದು ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ ಮತ್ತು 1 ತಿಂಗಳೊಳಗಾಗಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ಮುಚ್ಚಿನಡ್ಕ ಪಾಂಬಾರು ಅಮಲ ರಸ್ತೆ ಡಾಮರೀಕರಣವಾಗುತ್ತದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಂಡಿರುವುದಾಗಿ ಹೋರಾಟ ಸಮಿತಿ ಅಧ್ಯಕ್ಷ ಪಾಲೆಪ್ಪಾಡಿ ಡಾ.ಬಾಲಸುಬ್ರಹ್ಮಣ್ಯ ಭಟ್ ತಿಳಿಸಿದರು.
ಮುಂದೆ 45 ದಿನಗಳೊಳಗಾಗಿ ರಸ್ತೆ ಡಾಮರೀಕರಣಗೊಳ್ಳದೆ ಇದ್ದಲ್ಲಿ ನಮ್ಮಬೇಡಿಕೆ ಈಡೇರದಿದ್ದಲ್ಲಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.