Breaking News

ಕೆ.ವಿ.ಜಿ. ಪಾಲಿಟೆಕ್ನಿಕ್ ಉಪನ್ಯಾಸಕ ಸುಬ್ರಹ್ಮಣ್ಯ ಸಿ. ನಿವೃತ್ತಿ

Advt_Headding_Middle

ಕೆ.ವಿ.ಜಿ. ಪಾಲಿಟೆಕ್ನಿಕ್ ನ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ 34 ವರ್ಷಗಳ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆಯ ಚೀಮುಳ್ಳು ಮನೆಯ ಸುಬ್ರಹ್ಮಣ್ಯ ಸಿ. ಯವರು ಡಿ. 31ರಂದು ನಿವೃತ್ತಿ ಹೊಂದಿದರು.
ಕೃಷ್ಣ ಭಟ್ ಸಿ. ಮತ್ತು ಶ್ರೀಮತಿ ರುಕ್ಮಿಣಿ ದಂಪತಿಯ ಪುತ್ರರಾಗಿ 1961ರ ಡಿ. 19ರಂದು ಬೆಳ್ಳಾರೆಯ ಚೀಮುಳ್ಳು ಮನೆಯಲ್ಲಿ ಜನಿಸಿದ ಸುಬ್ರಹ್ಮಣ್ಯ ಸಿ.ಯವರು ತಮ್ಮ ಕಿರಿಯ ಪ್ರಾಥಮಿಕ ಶಿಕ್ಷಣವನ್ನು ದರ್ಖಾಸ್ತು ಸ.ಕಿ.ಪ್ರಾ. ಶಾಲೆಯಲ್ಲಿ, ಹಿರಿಯ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬೆಳ್ಳಾರೆ ಸ.ಹಿ.ಪ್ರಾ. ಶಾಲೆಯಲ್ಲಿ ಹಾಗೂ ಪ್ರೌಢ ಶಿಕ್ಷಣವನ್ನು ಬೆಳ್ಳಾರೆಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಪೂರೈಸಿ ಬಳಿಕ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಪೂರ್ವ ಶಿಕ್ಷಣವನ್ನು ಪಡೆದು ಧಾರವಾಡದ ಶ್ರೀ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ. ಪದವಿಯನ್ನು ಪಡೆದರು. 1987 ಆ. 17ರಂದು ಸುಳ್ಯದ ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿ ಸೇರ್ಪಡೆಗೊಂಡು ಬಳಿಕ 2011ರಲ್ಲಿ ಆಯ್ಕೆಶ್ರೇಣಿ ಉಪನ್ಯಾಸಕರಾಗಿ ಭಡ್ತಿ ಹೊಂದಿದರು. ಇವರ ಪತ್ನಿ ಶ್ರೀಮತಿ ಮಮತಾ ಎಸ್. ಭಟ್ ಗೃಹಿಣಿಯಾಗಿದ್ದಾರೆ. ಪುತ್ರಿ ಅಕ್ಷತಾ ಬಿ.ಇ‌. ಪದವೀಧರೆಯಾಗಿ ಹೈದರಾಬಾದ್ ನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಅಳಿಯ ಡಾ. ಶಶಾಂಕ್ ಹೈದರಾಬಾದ್ ನಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.