Breaking News

ಪೆರ್ನಾಜೆ: ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

Advt_Headding_Middle

 

ನಿವೃತ್ತ ಉಪನ್ಯಾಸಕರು ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ನಿವೃತ್ತ ಉಪನ್ಯಾಸಕರುಗಳಿಗೆ ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಕಾಲೇಜಿನ ಸಭಾಭವನದಲ್ಲಿ ಜ.1ರಂದು ಜರುಗಿತು.
ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಶ್ರೀಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು.
1991-’92ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ಇದೀಗ ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಸುಮಾರು 50ಕ್ಕೂ ಅಧಿಕ ವಿದ್ಯಾರ್ಥಿಗಳ ಒಟ್ಟು ಸೇರಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ನಿವೃತ್ತಿಹೊಂದಿದ ಶ್ರೀಮತಿ ಸುಕನ್ಯಾ ಮತ್ತು ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ಅರ್ಥಶಾಸ್ತ್ರ ಉಪನ್ಯಾಸಕ ಕೆ.ಆರ್.ಗೋಪಾಲಕೃಷ್ಣ ಅವರನ್ನು ಗೌರವಿಸಲಾಯಿತು. ಈ ಗುಂಪಿನ ವಿದ್ಯಾರ್ಥಿಗಳಾಗಿದ್ದು, ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಪ್ರದೀಪ್ ಕುಮಾರ್, ಉಮಾನಾಥ್. ಕೆ.ಎಸ್ ಹಾಗೂ ಇನ್ನೂ ಸೇನೆಯಲ್ಲಿ ತೊಡಗಿಸಿಕೊಂಡಿರುವ ನವೀನ್ ರೈ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಕಾಲೇಜು ಪ್ರಾಂಶುಪಾಲೆ ಶ್ರೀಮತಿ ಚಂದ್ರಮುಖಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಜಾತ ಮತ್ತಿತರರು ಉಪಸ್ಥಿತರಿದ್ದರು. ಸನ್ಮಾನಿತರ ಪರವಾಗಿ ಕೆ.ಆರ್.ಗೋಪಾಲಕೃಷ್ಣ, ಶ್ರೀಮತಿ ಸುಕನ್ಯಾ, ಶಾಲಾ ಪರವಾಗಿ ಆಂಗ್ಲ ಭಾಷಾ ಉಪನ್ಯಾಸಕ ಮಂಟಯ್ಯಾ, ಹಿರಿಯ ವಿದ್ಯಾರ್ಥಿಗಳ ಪರವಾಗಿ ಈಶ್ವರ ಉಳಿತ್ತಾಯ, ಹರೀಶ್ ರಾವ್ ಮತ್ತು ಶ್ರೀಮತಿ ಜಯಂತಿ ಅನಿಸಿಕೆಗಳನ್ನು ಹಂಚಿಕೊಂಡರು.
ರಮೇಶ್ ರಾವ್ ಪ್ರಾರ್ಥಿಸಿ, ದಿನೇಶ್ ಅಡ್ಕಾರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಶ್ರೀಮತಿ ಶ್ರೀಲತಾ ಪ್ರಸನ್ನ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.