Breaking News

ಬೂಡು ಭಗವತಿ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಚತೆ ಕಾರ್ಯಕ್ರಮ

Advt_Headding_Middle

 

ಪನ್ನೆಬೀಡು ಬೂಡು ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ರಿ., ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇರ್ಪಳ ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಚತೆ ಕಾರ್ಯಕ್ರಮವು ಆದಿತ್ಯವಾರ ದಿನಾಂಕ 02.01.2022ರಂದು ಜರುಗಿತು. ಶ್ರದ್ಧಾ ಕೇಂದ್ರ ಸ್ವಚ್ಚತೆ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ  ಎನ್. ಎ ರಾಮಚಂದ್ರರವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಮತ್ತು ಶ್ರೀ ಭಗವತಿ ಯುವ ಸೇವಾ ಸಂಘದ ಅಧ್ಯಕ್ಷರಾದ ವಾಸುದೇವ ನಾಯಕ್‌ರವರು ವಹಿಸಿದ್ದರು. ಶ್ರದ್ಧಾ ಕೇಂದ್ರ ಸ್ವಚ್ಚತೆ ಕಾರ್ಯಕ್ರಮದ ಕರಪತ್ರವನ್ನು ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ಬಿಡುಗಡೆ ಮಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಚೆನ್ನಕೇಶವರವರು ಶ್ರದ್ಧಾ ಕೇಂದ್ರ ಸ್ವಚ್ಚತೆಯ ಮಹತ್ವವನ್ನು ವಿವರಿಸಿ ಯೋಜನೆಯ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ, ಸುಳ್ಯ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ಮಲ್ಲೇಶ್ ಬೆಟ್ಟಂಪಾಡಿ ಮತ್ತು ವಿಪತ್ತು ನಿರ್ವಹಣಾ ಘಟಕದ ಪ್ರತಿನಿದಿ ಮೋಹನ್ ಕೇರ್ಪಳ, ಕೇರ್ಪಳ ಒಕ್ಕೂಟದ ಪದಾಧಿಕಾರಿಗಳು ಮತ್ತು ಸೇವಾ ಪ್ರತಿನಿಧಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರಾದ ಹೇಮಲತರವರು ಕಾರ್ಯಕ್ರಮವನ್ನು ನಿರೂಪಿಸಿದರು. ಸುಮಾರು 200ಕ್ಕೂ ಹೆಚ್ಚು ಸ್ವಯಂ ಸೇವಕರು ಸ್ವಚ್ಚತಾ ಶ್ರಮದಾನದಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.