Breaking News

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಓ.ಎನ್.ಜಿ.ಸಿ. ಎಂ.ಆರ್.ಪಿ.ಎಲ್. ಹಾಗೂ ಗಡಿಪ್ರಾಧಿಕಾರ ಕ್ರಿಯಾಯೋಜನೆಯಡಿ ನಿರ್ಮಾಣಗೊಂಡ ನೂತನ ಕಟ್ಟಡ ಲೋಕಾರ್ಪಣೆ

Advt_Headding_Middle

 

ದ.ಕ. ಉಸ್ತುವಾರಿ ಸಚಿವ ಎಸ್.ಅಂಗಾರ, ಇಂಧನ ಸಚಿವ ಸುನಿಲ್ ಕುಮಾರ್ , ಸಂಸದ ನಳಿನ್ ಕುಮಾರ್, ಡಾ. ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಗಣ್ಯರ ಉಪಸ್ಥಿತಿ

ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಓ.ಎನ್.ಜಿ.ಸಿ. ಎಂ.ಆರ್.ಪಿ.ಎಲ್. (ಸಿ.ಎಸ್.ಆರ್.) ಅನುದಾನದಿಂದ ನಿರ್ಮಾಣಗೊಂಡ ಅಕ್ಷರ ಹಾಗೂ ಗಡಿ ಪ್ರಾಧಿಕಾರ ಕ್ರಿಯಾಯೋಜನೆಯಡಿ ನಿರ್ಮಿತ ಅನಿಕೇತ ನೂತನ ಶಾಲಾ ಕಟ್ಟಡ ಲೋಕಾರ್ಪಣೆ ಸಮಾರಂಭವು ಜ.3ರಂದು ಅಪರಾಹ್ನ ಜರುಗಿತು.

ದ.ಕ. ಜಿಲ್ಲಾ ಉಸ್ತುವಾರಿ, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.
ಗಡಿ ಪ್ರಾಧಿಕಾರ ಕ್ರಿಯಾಯೋಜನೆಯಡಿ ನಿರ್ಮಾಣಗೊಂಡಿರುವ ಅನಿಕೇತ ಕಟ್ಟಡವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಹಾಗೂ ಎಂ.ಆರ್.ಪಿ.ಎಲ್. ಕೊಡುಗೆಯ ಅಕ್ಷರ ಕಟ್ಟಡವನ್ನು ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲು ಅವರು ಲೋಕಾರ್ಪಣೆ ಮಾಡಿದರು. ಅನುಭವ ಸಭಾಭವನವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯ ಅಭ್ಯಾಗತರುಗಳಾಗಿ ಎಂ.ಆರ್.ಪಿ.ಎಲ್.ನ ಪ್ರಧಾನ ವ್ಯವಸ್ಥಾಪಕ ಕೃಷ್ಣ ಹೆಗ್ಡೆ, ಎಂ.ಆರ್.ಪಿ.ಎಲ್. ಸೀನಿಯರ್ ಮೆನೆಜರ್ ವಿಜಯೇಂದ್ರ ಭಟ್,
ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಕೆ.ಎಂ.ಬಾಬು ಕದಿಕಡ್ಕ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ವಿವೇಕಾನಂದ ವಿದ್ಯಾಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ. ಉಪೇಂದ್ರ ಕಾಮತ್, ಅವರು ಗೌರವ ಉಪಸ್ಥಿತರಿದ್ದರು. ವಿದ್ಯಾಸಂಸ್ಥೆಯ ಸಂಚಾಲಕ ಸುಧಾಕರ ಕಾಮತ್ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ, ನಿವೃತ್ತರಾದ ಗೋಪಾಲರಾವ್ ಅವರನ್ನು ವಿದ್ಯಾಸಂಸ್ಥೆಯ ಪರವಾಗಿ ಡಾ. ಪ್ರಭಾಕರ ಭಟ್ ಕಲ್ಲಡ್ಕ ಸನ್ಮಾನಿಸಿದರು.
ಸಮಾರಂಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ದ.ಕ.ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ. ಜಿಲ್ಲಾ ಉಸ್ತುವಾರಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಎಂ‌.ಆರ್.ಪಿ.ಎಲ್. ಪ್ರಧಾನ ವ್ಯವಸ್ಥಾಪಕ ಕೃಷ್ಣ ಹೆಗ್ಡೆ ಸೇರಿದಂತೆ ಗಣ್ಯ ಅತಿಥಿಗಳು ಶುಭಹಾರೈಸಿದರು.


ಈ ಸಂದರ್ಭದಲ್ಲಿ ಸುಧಾಕರ ಕಾಮತ್ ಅವರ ತಾಯಿ ಶ್ರೀಮತಿ ಪದ್ಮಾವತಿ ಕಾಮತ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ಸಹಸೇವಾ ಪ್ರಮುಖ್ ನ.ಸೀತಾರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ, ಶ್ರೀಮತಿ ಜಯಲಕ್ಷ್ಮಿ ದಾಮ್ಲೆ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಚಂದ್ರಶೇಖರ ತಳೂರು, ಜಿ.ಜಿ.ನಾಯಕ್ ಸುಳ್ಯ, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಸೇರಿದಂತೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಪೋಷಕ ಪ್ರತಿನಿಧಿಗಳು, ಶಾಲಾ ಸಹಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.